ಬೆಂಗಳೂರು: ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ ಎಂದು ನಟ ದರ್ಶನ್ ತೂಗುದೀಪ ಹೇಳಿದ್ದಾರೆ.
ಮಳೆ ಕೊರತೆ ನಡುವೆ ಕರ್ನಾಟಕದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಮತ್ತು ರೈತರು ಪ್ರತಿಭಟನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ ಎಂದು ಅಭಿಪ್ರಾಯಪಟ್ಟಿದ್ದಾರೆ.




