ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ

3 years ago

#Honorary #award #ceremony #KannadaSahityaParishad #kasapa #ಕಸಾಪ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಅಕ್ಟೋಬರ್ ೧೧ ಬುಧವಾರ ಸಂಜೆ ೫-೩೦ಕ್ಕೆ ಡಾ. ಮನು ಬಳಿಗಾರ್ ಸ್ಥಾಪಿಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ.ಧರಣಿದೇವಿ ಮಾಲಗತ್ತಿ ಅವರು ಕಾರ್ಯಕ್ರಮ ಉದ್ಘಾಟಿಸಿ, ಪ್ರಶಸ್ತಿ ಪ್ರದಾನಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ದತ್ತಿ ದಾನಿಗಳಾದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ. ಮನು ಬಳಿಗಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

೨೦೨೨ನೆಯ ಸಾಲಿನ ಡಾ. ಮನು ಬಳಿಗಾರ್ ಸ್ಥಾಪಿಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿಯನ್ನು ಖ್ಯಾತ ಲೇಖಕಿ ವಸುಮತಿ ಉಡುಪ ಹಾಗೂ ಖ್ಯಾತ ಸಾಹಿತಿ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಅವರಿಗೆ ಮತ್ತು ೨೦೨೩ನೆಯ ಸಾಲಿನ ಡಾ. ಮನು ಬಳಿಗಾರ್ ಸ್ಥಾಪಿಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿಯನ್ನು ಬಂಡಾಯ ಬರಹಗಾರ್ತಿ, ರಾಜಕಾರಣಿ ಡಾ. ಬಿ.ಟಿ. ಲಲಿತಾ ನಾಯಕ್ ಹಾಗೂ ಖ್ಯಾತ ಲೇಖಕ ಡಾ. ಅಮರೇಶ ನುಗಡೋಣಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply