ಕಾಂತರಾಜ ಆಯೋಗದ ವರದಿ ಶೀಘ್ರ ಜಾರಿಗಾಗಿ ಮನವಿ

3 years ago

#Request #speedy #implementation #Kantarajacommissionreport #survey

ಬೆಂಗಳೂರು: ಕಾಂತರಾಜ ಆಯೋಗದ ವರದಿಯನ್ನು ಕೂಡಲೇ ಸರ್ಕಾರಕ್ಕೆ ಸಲ್ಲಿಸಬೇಕೆಂದು ಒತ್ತಾಯಿಸಿ ಹಿಂದುಳಿದ ಜನ ಜಾಗೃತಿ ವೇದಿಕೆ ಹಾಗು ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರಿಗೆ ಮನವಿಪತ್ರ ನೀಡಲಾಯಿತು.

ಬೆಂಗಳೂರಿನ ದೇವರಾಜ ಅರಸು ಭವನದಲ್ಲಿರುವ ಹಿಂದುಳಿದ ವರ್ಗಗಳ ಆಯೋಗದ ಕಚೇರಿಯಲ್ಲಿ ಮೇಲ್ಕಂಡ ಸಂಸ್ಥೆಗಳ ನಿಯೋಗ ಜಯಪ್ರಕಾಶ್ ಹೆಗ್ಡೆ ಅವರನ್ನು ಭೇಟಿ ಮಾಡಿ ಆದಷ್ಟು ಜಾಗ್ರತೆ ವರದಿ ಸಲ್ಲಿಸಿ ಹಿಂದುಳಿದ ವರ್ಗಗಳ ಹಿತ ಕಾಯುವಂತೆ ಮನವಿ ಮಾಡಿಕೊಳ್ಳಲಾಯಿತು.

ಮನವಿಪತ್ರ ಸ್ವೀಕರಿಸಿ ಮಾತನಾಡಿದ ಜಯಪ್ರಕಾಶ್ ಹೆಗ್ಡೆ, ಮುಂದಿನ ತಿಂಗಳು ತಮ್ಮ ಅಧ್ಯಕ್ಷ ಅವಧಿ ಮುಗಿಯಲಿದ್ದು, ಅಷ್ಟರ ಒಳಗೆ ವರದಿ ಸಲ್ಲಿಸಲಾಗುವುದು. ಇದಕ್ಕೆ ಸರ್ಕಾರದಿಂದ ಯಾವುದೇ ಒತ್ತಡವಿಲ್ಲ ಎಂದು ತಿಳಿಸಿದರು.

ಮುಖ್ಯಮಂತ್ರಿಗಳಿಗೆ ಮನವಿ: ಕಾಂತರಾಜ ಆಯೋಗದ ವರದಿಯನ್ನು ಆದಷ್ಟು ಶೀಘ್ರವಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಅವರ ಆಪ್ತ ಕಾರ್ಯದರ್ಶಿಗಳಿಗೆ ಮನವಿ ಅಪಿ೯ಸಲಾಯಿತು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಮಾಜಿ ಶಾಸಕ ಆರ್.ಕೆ. ಸಿದ್ಧರಾಮಣ್ಣ, ಹಿಂದುಳಿದ ಜನ ಜಾಗೃತಿ ವೇದಿಕೆ ಗೌರವ ಅಧ್ಯಕ್ಷ ಪ್ರೊ. ಹೆಚ್. ರಾಚಪ್ಪ, ಉಪಾಧ್ಯಕ್ಷರುಗಳಾದ ಡಿ.ಆರ್. ಉಮೇಶ್ ಯಾದವ್, ಜಿ. ಪರಮೇಶ್ವರಪ್ಪ, ಕಾರ್ಯದರ್ಶಿ ಮನೋಹರಕುಮಾರ್, ಸಂಚಾಲಕ ಆರ್.ಟಿ.ನಟರಾಜ್, ಹಿಂದುಳಿದ ಜಾತಿಗಳ ಒಕ್ಕೂಟದ ಗೌರವ ಅಧ್ಯಕ್ಷ ಪಿ.ಆರ್.ಗಿರಿಯಪ್ಪ, ಅಧ್ಯಕ್ಷ ವಿ.ರಾಜು ಉಪಸ್ಥಿತರಿದ್ದರು.

Leave a Reply