ಬ್ರೂಕ್ ಫೀಲ್ಡ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ

2 years ago

#Leopard #spotted #Bangalore #Brookfield

ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಸಂಸ್ಥೆಗಳು ಕಾರ್ಯ ನಿರ್ವಹಿಸುವ ನಗರದ  ಬ್ರೂಕ್ ಫೀಲ್ಡ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ. ಈ ಬೆಳವಣಿಗೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ನಗರದ ಅತ್ಯಂತ ಜನದಟ್ಟಣೆಯ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕೆ ದೌಡಾಯಿಸಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಚಿರತೆ ಕಾಣಿಸಿಕೊಂಡಿದೆ ಎಂಬ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಕೈಗೊಂಡಿದ್ದಾರೆ. ಅಗತ್ಯವಿದ್ದಲ್ಲಿ ಬೋನ್ ಇಡಲಾಗುವುದು  ಎಂದು ನಗರ ಅರಣ್ಯ ಮುಖ್ಯ ಸಂರಕ್ಷಣಾಧಿಕಾರಿ ಎಸ್ ಎಸ್ ಲಿಂಗರಾಜು ತಿಳಿಸಿದ್ದಾರೆ.

ಬೇರೆಲ್ಲಿಯೋ ವಾಸವಿರುವ ಚಿರತೆ ಆಹಾರ ಅರಸಿ, ನಾಯಿಗಳನ್ನು ಹುಡುಕಿಕೊಂಡು ಅಲೆದಾಡುತ್ತಾ ಇಲ್ಲಿಗೆ ಬಂದಿರಬಹುದು. ಅಂತೆಯೇ ವಾಪಸ್ ಹೋಗಬಹುದು, ಚಿರತೆಗಳು ಮಾನವ ವಾಸ ಸ್ಥಾನಕ್ಕೆ ಹೊಂದಿಕೊಳ್ಳುತ್ತವೆ ಇದರಲ್ಲಿ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ಸಿಗ್ನಲ್ ಗಳಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಸಿಸಿಟಿವಿ ಫೂಟೇಜ್ ಗಳನ್ನೂ ಪರಿಶೀಲನೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅರಣ್ಯ ಅಧಿಕಾರಿಗಳು ಈ ಪ್ರದೇಶದಲ್ಲಿ ಗಸ್ತು ತಿರುಗಲು ಪ್ರಾರಂಭಿಸುತ್ತಿದ್ದಂತೆ, ನಾಗರಿಕರು ಗಾಬರಿಯಾಗದಂತೆ ಮತ್ತು ವದಂತಿಗಳನ್ನು ಹರಡದಂತೆ ವಿನಂತಿಸಿದ್ದಾರೆ. ರಾತ್ರಿಯಲ್ಲಿ ಏಕಾಂಗಿಯಾಗಿ ಅಲೆದಾಡದಂತೆ ನಾಗರಿಕರಿಗೆ ಮನವಿ ಮಾಡಲಾಗಿದೆ. ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆಯೂ ಕೋರಲಾಗಿದೆ.

Leave a Reply