ದಿ ವೆಕೆಂಟ್ ಹೌಸ್ ಬಿಡುಗಡೆ ದಿನಾಂಕ ನಿಗದಿ

3 years ago

ನಟನೆ ಮೂಲಕ ಪರಿಚಿತ ಎಸ್ತರ್ ನರೋನ್ಹಾ ನಿರ್ದೇಶಕಿಯಾಗಿ ಹೊಸ ಪ್ರಯೋಗ ಮಾಡಿದ್ದಾರೆ. ‘ನಾವಿಕ’, ‘ಅತಿರಥ’, ‘ನುಗ್ಗೇಕಾಯಿ’, ‘ಲೋಕಲ್ ಟ್ರೈನ್’, ‘ಲಂಕೆ’ ಇನಾಮ್ದಾರ್ ಮೊದಲಿದ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.

‘ದಿ ವೆಕೆಂಟ್ ಹೌಸ್’ ಸಿನಿಮಾ ಮೂಲಕ ನಿರ್ದೇಶನದ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಜೊತೆ ಜೊತೆಗೆ ನಿರ್ಮಾಣ, ಸಂಗೀತ ನಿರ್ದೇಶನ, ನಟನೆಯಲ್ಲೂ ಒಂದು ಕೈ ನೋಡಿದ್ದಾರೆ.

SRV ಥಿಯೇಟರ್ ನಲ್ಲಿ ಮಾತನಾಡಿದ ಎಸ್ತಾರ್ ನರೋನ್ಹಾ, ದಿ ವೆಕೆಂಟ್ ಹೌಸ್ ಹಾರರ್ ಸಿನಿಮಾವಲ್ಲ. ಇದು ಖಾಲಿ ಮನೆ ಸುತ್ತಾ ಸಾಗುವ ಕಥೆ. ಈಗಿನ ಯುವಕರಿಗೆ ಬಹಳ ಕನೆಕ್ಟ್ ಆಗುವ ಸಿನಿಮಾ ಎಂದು ಹೇಳಿದರು.

ಪ್ರೀತಿ ಮತ್ತು ಎಮೋಷನ್ ಎರಡನ್ನು ಸೇರಿ ಎಣೆದ ಕಥೆ ಇದು. ಡೈರೆಕ್ಷನ್ ಮಾಡಿದ್ದು ಖುಷಿ ಅನಿಸಿತು. ನನ್ನ ವಿಷನ್ ನ್ನು ನಾನು ಓಪನ್ ಆಗಿ ಹೇಳುವ ಸ್ವಾತಂತ್ರ ನನ್ನ ಸಿನಿಮಾದಲ್ಲಿ ಸಿಕ್ಕಿದೆ. ನಾನು ಎಂಟು ವರ್ಷದಿಂದ ಸಿಂಗರ್.. ನಾನು ರಂಗಭೂಮಿಗೆ ಬಂದಿದ್ದು ಸಿಂಗರ್ ಆಗಿಯೇ.. ಹೀಗಾಗಿ ಈ ಚಿತ್ರದಲ್ಲಿ ನಾನೇ ಸಂಗೀತ ನಿರ್ದೇಶಕಿಯಾಗಿಯೂ ಜವಾಬ್ದಾರಿ ನಿಭಾಯಿಸಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದರು.

ದಿ ವೆಕೆಂಟ್ ಹೌಸ್ ನೈಜ ಘಟನೆಯಾಧಾರಿತ ಚಿತ್ರವಲ್ಲ. ಸಿನಿಮಾ 1.40 ನಿಮಿಷ ಇದೆ. ಎಲ್ಲಿಯೂ ಬೋರ್ ಹೊಡೆಸಲ್ಲ. ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದು ಮನವಿ ಮಾಡಿದರು.

ದಿ ವೆಕೆಂಟ್ ಹೌಸ್ ಸಿನಿಮಾ ಈಗಾಗಲೇ ಸದ್ದು ಮಾಡುತ್ತಿದೆ. ಹಾಡುಗಳು, ಟೀಸರ್ ಗಮನ ಸೆಳೆಯುತ್ತಿವೆ. ಕನ್ನಡ ಹಾಗೂ ಕೊಂಕಣಿ ಭಾಷೆಯಲ್ಲಿ ಮೂಡಿಬಂದಿರುವ ಚಿತ್ರಕ್ಕೆ ನರೇಂದ್ರ ಗೌಡ ಛಾಯಾಗ್ರಹಣ, ವಿಜಯ್ ರಾಜ್ ಸಂಕಲನ ಇದೆ. 

‘ದಿ ವೆಕೆಂಟ್ ಹೌಸ್’ ಸಿನಿಮಾವನ್ನು ಬಹುತೇಕ ಮಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ಎಸ್ತರ್ ನರೋನ್ಹಾ ಮಂಗಳೂರಿನವರಾದರು ಬೆಳೆದಿದ್ದೆಲ್ಲ ಮುಂಬೈನಲ್ಲಿ. ಕನ್ನಡ ಸಿನಿಮಾ ‘ಉಸಿರಿಗಿಂತ ನೀನೇ ಹತ್ತಿರ’ ಎಂಬ ಸಿನಿಮಾ ಮೂಲಕ ಚಂದನವನಕ್ಕೆ ಕಾಲಿಟ್ಟರು.

ಬಾಲಿವುಡ್ ಖ್ಯಾತ ನಟ ಅನುಪಮ್ ಖೇರ್ ನಟನಾ ಶಾಲೆಯಲ್ಲಿ ತರಬೇತಿ ಪಡೆದುಕೊಂಡು ಹಿಂದಿ ಚಿತ್ರರಂಗದಲ್ಲಿ ಪ್ರವೇಶ ಪಡೆದ ನಂತರ ತೆಲುಗು, ತುಳು ಸಿನಿಮಾಗಳಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ.

ಜಾನೆಟ್ ನೊರೊನ್ಹಾ ಪ್ರೊಡಕ್ಷನ್ಸ್ ನಿರ್ಮಾಣ ಕೂಡ ಮಾಡಿದ್ದಾರೆ. ಇದೇ ತಿಂಗಳ 17ರಂದು ರಾಜ್ಯಾದ್ಯಂತ ಸಿನಿಮಾ ತೆರೆಗೆ ಬಿಡುಗಡೆ ಆಗಲಿದೆ.

Leave a Reply