ಎಸ್.ಎಸ್.ಎಲ್.ಸಿ ಫಲಿತಾಂಶ: ಶೇ 99. 9 ವಿದ್ಯಾರ್ಥಿಗಳು ಪಾಸ್

5 years ago

ಬೆಂಗಳೂರು: SSLC ಪರೀಕ್ಷೆ ಬರೆದಿದ್ದ 8,71,443 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಹೊರತುಪಡಿಸಿ ಉಳಿದ ಎಲ್ಲ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದರು.

020-21 ನೇ ಶೈಕ್ಷಣಿಕ ಸಾಲಿನ SSLC ಪರೀಕ್ಷೆ ಫಲಿತಾಂಶ ಘೋಷಿಸಿದ ಅವರು, ಈ ಸಾಲಿನಲ್ಲಿ ಶೇ.99.9ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಪಾಸ್ ಆಗಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

ಜುಲೈ 19 ಮತ್ತು 22 ರಂದು ಪರೀಕ್ಷೆ ನಡೆದಿತ್ತು. 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಒಬ್ಬ ವಿದ್ಯಾರ್ಥಿ ತನ್ನ ಬದಲಿಗೆ ಬೇರೆಯವರ ಮೂಲಕ ಪರೀಕ್ಷೆ ಬರೆಸಿದ್ದರು. ಆ ವಿದ್ಯಾರ್ಥಿಯನ್ನು ಮಾತ್ರ ಫೇಲ್ ಮಾಡಲಾಗಿದೆ ಎಂದು ಹೇಳಿದರು.

ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ 157 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. 562 ರಿಂದ 625 ಅಂಕಗಳನ್ನು ಪಡೆದವರಿಗೆ A+ ಗ್ರೇಡ್ ನೀಡಲಾಗಿದೆ. ಬಿ ಗ್ರೇಡ್‌ನಲ್ಲಿ 2,87,694 ವಿದ್ಯಾರ್ಥಿಗಳು, ಸಿ ಗ್ರೇಡ್‌ನಲ್ಲಿ 1,13,610 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ  ಎಂದರು.

ವಿದ್ಯಾರ್ಥಿಗಳು ತಮ್ಮ ಫಲಿತಾಂಸವನ್ನು https:// sslc.karnataka.gov.in  ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದು.

Leave a Reply