ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯದವರಿಗೆ ಆರ್ಥಿಕಾಭಿವೃದ್ಧಿ ಹೊಂದಲು ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
ಶಿವಮೊಗ್ಗ: 2023-24 ನೇ ಸಾಲಿಗೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯದವರಿಗೆ ಆರ್ಥಿಕ ಅಭಿವೃದ್ದಿಯನ್ನು ಹೊಂದಲು ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ(ನೇರ ಸಾಲ) ಯೋಜನೆ, ಉದ್ಯಮಶೀಲತಾ ಯೋಜನೆ (2.00 ಲಕ್ಷ ಮತ್ತು 4.00 ಲಕ್ಷ), ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನತೆಗೆ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ದಿ: 30-11-2023 ಕಡೆಯ ದಿನವಾಗಿದೆ. ಆಸಕ್ತರು ಸೇವಾ ಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಗ್ರಾಮ ಒನ್ಗಸಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.




