ಬೆಂಗಳೂರು: ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ನಿರ್ವಹಣೆ ಕುರಿತು 30 ದಿನಗಳ ಉಚಿತ ತರಬೇತಿಯು ನವೆಂಬರ್ 23 ರಿಂದ ಪ್ರಾರಂಭವಾಗಲಿದೆ, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದು.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ನವೆಂಬರ್ 21 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9113880324, 8884554510, 9241482541 ಅನ್ನು ಸಂಪರ್ಕಿಸಬಹುದಾಗಿದೆ.




