ಮಹಾನಗರ ಪಾಲಿಕೆಗಳ ಚುನಾವಣೆ ದಿನಾಂಕ ಘೋಷಣೆ

5 years ago

ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ನಗರ ಪಾಲಿಕೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು ಘೋಷಿಸಿದೆ.

ಆಗಸ್ಟ್ 16ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ. ಆಗಸ್ಟ್ 23 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದರೆ, ಸೆಪ್ಟೆಂಬರ್ 3ರಂದು ಮತದಾನ ನಡೆದು, ಸೆ. 6 ರಂದು ಫಲಿತಾಂಶ ಘೋಷಣೆಯಾಗಲಿದೆ.

ಕೊರೋನಾ ಕಾರಣದಿಂದ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಮುಂದೂಡಲಾಗಿತ್ತು. ಆದರೆ ಮೂರು ನಗರ ಪಾಲಿಕೆ ಚುನಾವಣೆಗೆ ದಿನಾಂಕ ಘೋಷಿಸಲಾಗಿದೆ.

ಕೊರೋನಾ 3ನೇ ಅಲೆ ಭೀತಿ ಕರ್ನಾಟದಲ್ಲಿ ಆರಂಭವಾಗಿದ್ದು, 2ನೇ ಅಲೆ ವೇಳೆಯೇ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಮುಂದೂಡಲಾಗಿತ್ತು. ರಾಜ್ಯ ಸರ್ಕಾರ ಚುನಾವಣೆ ನಡೆಸದಂತೆ ಮನವಿ ಮಾಡಿಕೊಂಡಿತ್ತು. ಇದರಿಂದಾಗಿ ಚುನಾವಣಾ ಆಯೋಗ ಮೀಸಲಾತಿಯನ್ನು ಪ್ರಕಟಿಸಿದರೂ ಚುನಾವಣೆಗೆ ದಿನಾಂಕ ನಿಗದಿಯಾಗಿಲ್ಲ.

ಮಹಾನಗರ ಪಾಲಿಕೆಗಳಿಗೆ ಕರ್ನಾಟಕ ಚುನಾವಣೆ ಆಯೋಗ ಚುನಾವಣೆ ಘೋಷಣೆ ಮಾಡಿರುವುದು ಮುಂದಿನ ದಿನಗಳಲ್ಲಿ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ನಿಗದಿ ಮಾಡುವ ಸಾಧ್ಯತೆಗಳು ದಟ್ಟವಾಗಿವೆ.

Leave a Reply