ಧಾರವಾಡ: ಜಿಲ್ಲಾ ಮಟ್ಟದ 2023-24ನೇ ಸಾಲಿನ ಫಲ-ಪುಷ್ಪ ಪ್ರದರ್ಶನವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ, ಕೃಷಿ ಇಲಾಖೆ ಮತ್ತು ಫಲ-ಪುಷ್ಪ ಪ್ರದರ್ಶನ ಸಮಿತಿ, ಜಿಲ್ಲಾ ಹಾಪ್ ಕಾಮ್ಸ್, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಧಾರವಾಡ ಇವರ ಸಹಯೋಗದೊಂದಿಗೆ ಡಿಸೆಂಬರ್ 25, 2023 ರಿಂದ 27, 2023 ರವರೆಗೆ ಮೂರು ದಿನಗಳ ಕಾಲ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆ ಆವರಣದಲ್ಲಿ ಆಯೋಜಿಸಲಾಗಿದೆ.
ಸದರಿ ಫಲ-ಪುಷ್ಪ ಪ್ರದರ್ಶನದಲ್ಲಿ ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ಸಂಘ ಸಂಸ್ಥೆಗಳು, ರೈತರು ಮತ್ತು ಸಾರ್ವಜನಿಕರಿಗೆ ತೋಟಗಾರಿಕೆ ಬೆಳೆಗಳು, ಹೂಗಳು ಮತ್ತು ಅಲಂಕಾರಿಕ ಗಿಡಗಳ ಪ್ರದರ್ಶನದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0836-2957801 ರಲ್ಲಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯ ವಲಯ) ಧಾರವಾಡ ಇವರನ್ನು ಸಂಪರ್ಕಿಸಬಹುದು.




