ಖಲಿಸ್ತಾನಿ ಭಯೋತ್ಪಾದಕ ಪಾಕಿಸ್ತಾನದಲ್ಲಿ ಸಾವು

2 years ago

#Khalistani #terrorist #dies #Pakistan

ದೆಹಲಿ: ಜರ್ನೈಲ್ ಸಿಂಗ್ ಭಿಂದ್ರನ್ ವಾಲೆ ಸೋದರಳಿಯ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್ (72) ಡಿಸೆಂಬರ್ 2 ರಂದು ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳ ಮೂಲಗಳಿಂದ ತಿಳಿದುಬಂದಿದೆ. ಭಿದ್ರಾನ್‌ವಾಲೆ ಸಾವಿನ ನಂತರ ಈತ ಪಾಕಿಸ್ತಾನಕ್ಕೆ ಪಲಾಯನಗೈದಿದ್ದ.

ರೋಡ್ ನಿಷೇಧಿತ ಸಂಘಟನೆ ‘ಖಲಿಸ್ತಾನ್ ಜಿಂದಾಬಾದ್ ಫೋರ್ಸ್’ ಮುಖ್ಯಸ್ಥರಾಗಿದ್ದು, ಭಾರತದ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಆರೋಪವಿತ್ತು. ಗುಪ್ತಚರ ಇಲಾಖೆಯ ಮಾಹತಿ ಪ್ರಕಾರ, ಈತ ಲಾಹೋರ್‌ ನಿವಾಸಿಯಾಗಿದ್ದ.

ಪಂಜಾಬ್‌ಗೆ ಡ್ರಗ್ಸ್, ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಟಿಫಿನ್ ಬಾಕ್ಸ್ ಬಾಂಬ್‌ಗಳನ್ನು ಕಳುಹಿಸುತ್ತಿದ್ದ ಆರೋಪಗಳು ಈತನ ವಿರುದ್ಧ ಇವೆ. ಜೊತೆಗೆ ರಾಜ್ಯದ ಪ್ರಮುಖ ವ್ಯಕ್ತಿಗಳ ಹತ್ಯೆಗೆ ಸಂಚು ರೂಪಿಸಿದ್ದ ಎಂಬ ಶಂಕೆಗಳು ಇವೆ. ನೇಪಾಳದಲ್ಲಿ 20 ಕೆಜಿ ಸ್ಫೋಟಕ RDX ಸಾಗಿಸುತ್ತಿದ್ದ ವೇಳೆ ಬಂಧಿಸಲಾಗಿತ್ತು.

ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಕ್ಟೋಬರ್‌ ತಿಂಗಳಲ್ಲಿ ದಾಳಿ ನಡೆಸಿ ಪಂಜಾಬ್‌ನ ಮೊಗಾದಲ್ಲಿರುವ ಈತನ ಒಡೆತನದಲ್ಲಿಉರವ ಆಸ್ತಿಗಳನ್ನು ಜಪ್ತಿ ಮಾಡಿತ್ತು. 2021 ಮತ್ತು 2023 ರ ನಡುವೆ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕಾಗಿ ರೋಡ್ ವಿರುದ್ಧದ ಆರು ಭಯೋತ್ಪಾದಕ ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿತ್ತು.

Leave a Reply