ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿದ ಬಿಟ್ ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಹಲವು ಸವಾಲುಗಳು ಎದುರಾಗಿದ್ದು, ಅವುಗಳನ್ನು ನಿಭಾಯಿಸುವುದೇ ಸವಾಲಾಗಿದೆ.
ಈ ಹಗರಣದ ಪ್ರಮುಖ ಆರೋಪಿಯಾಗಿರುವ ಶ್ರೀಕಿ ಅಲಿಯಾಸ್ ಶ್ರೀಕಾಂತ್ ತನಿಖೆಯ ವಿಚಾರಕ್ಕೆ ವಿಶೇಷ ತನಿಖಾ ತಂಡದ ಪೊಲೀಸರಿಗೆ ತಲೆನೋವಾಗಿದ್ದಾನೆ. ಪೊಲೀಸರ ವಿಚಾರಣೆಗೆ ಹಾಜರಾಗದೇ ಶ್ರೀಕಿ ತಲೆಮರೆಸಿಕೊಂಡಿದ್ದಾನೆ. ಐದಾರು ಬಾರಿ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗಿಲ್ಲ. ಪ್ರತಿ ಬಾರಿ ಒಂದೊಂದು ಕಾರಣ ನೀಡುತ್ತಿರುವ ಆತ, ತಂದೆಗೆ ಹುಷಾರಿಲ್ಲ, ತಾಯಿಗೆ ಹುಷಾರಿಲ್ಲ ಹಾಗೂ ನನಗೆ ಹುಷಾರಿಲ್ಲ ಎಂಬ ಕಾರಣ ನೀಡಿ ವಿಚಾರಣೆಯಿಂದ ದೂರ ಉಳಿದಿದ್ದಾನೆ.
ಒಂದೂವರೆ ತಿಂಗಳ ಹಿಂದೆ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಆತ ಊಟ, ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಮಲಗಲು ಮನೆಗೆ ತೆರಳುತ್ತಿರುವ ಮಾಹಿತಿ ಇದೆ. ವಿಚಾರಣೆ ನಡೆಸಲು ನಿಮ್ಹಾನ್ಸ್ ಗೆ ತೆರಳಿದ ಎಸ್ಐಬಟಿ ತಂಡಕ್ಕೆ ಡೆತ್ನೋಮಟ್ ಬರೆದು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದ. ಈ ರೀತಿ ಶ್ರೀಕಿ ನಡೆದುಕೊಳ್ಳುತ್ತಿರುವುದರಿಂದ ತನಿಖೆಗೆ ಹಿನ್ನಡೆಯಾಗುತ್ತಿದೆ.
ಶ್ರೀಕಿಯನ್ನು ಬಂಧಿಸಿ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ ತನಿಖೆಯಲ್ಲಿ ಲೋಪ ನಡೆದಿದೆ ಎಂದು ಎಸ್ಐಕಟಿ ತನಿಖೆಯಲ್ಲಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಎಫ್ಐಿಆರ್ ಕೂಡ ದಾಖಲಾಗಿತ್ತು. ಇದೀಗ ಈ ಪ್ರಕರಣದ ಪ್ರಮುಖ ಸಾಕ್ಷಿ ಶ್ರೀಕಿ ತನಿಖೆಗೆ ಸಹಕರಿಸದೇ ಇರುವುದು ಸಮಸ್ಯೆಯಾಗಿದೆ.




