ಸಕ್ಕರೆ ಕಾರ್ಖಾನೆಗಳಲ್ಲಿ ತೂಕ ಯಂತ್ರಗಳ ಡಿಜಟಲೀಕರಣ: 15 ದಿನಗಳ ಗುಡುವು: ಕೆ.ಎಚ್.ಮುನಿಯಪ್ಪ

2 years ago

ಬೆಳಗಾವಿ: ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬಿನ ತೂಕದಲ್ಲಿ ರೈತರಿಗೆ ಆಗುತ್ತಿರುವ ಮೋಸ ನಿಯಂತ್ರಿಸಲು ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳಲ್ಲಿನ ತೂಕದ ಯಂತ್ರಗಳ ಡಿಜಿಟಲೀಕರಣಕ್ಕೆ ಸರ್ಕಾರ ಸೂಚನೆ ನೀಡಿದ್ದು, ಇದನ್ನು ಅಳವಡಿಸಲು ಕಾರ್ಖಾನೆಗಳಿಗೆ ಹದಿನೈದು ದಿನಗಳ ಗಡುವು ನೀಡಲಾಗಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಈ ಕುರಿತು ಸಕ್ಕರೆ ಸಚಿವ ಶಿವಾನಂದ ಪಾಟೀಲ, ಶಾಸಕ ಲಕ್ಷ್ಮಣ ಸವದಿ ಸೇರಿದಂತೆ ಕಬ್ಬು ಬೆಳೆಯುವ ಪ್ರದೇಶಗಳ ಜನಪ್ರತಿನಿಗಳು, ಕಾನೂನು ಮಾಪನಶಾಸ್ತ್ರ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಹಂಗಾಮಿನಲ್ಲಿ 78 ಸಕ್ಕರೆ ಕಾರ್ಖಾನೆಗಳು ಕಬ್ಬು ಅರೆಯುತ್ತಿದ್ದು, 24 ಕಾರ್ಖಾನೆಗಳು ಮಾತ್ರ ಡಿಜಿಟಲ್ ತೂಕದ ಯಂತ್ರಗಳನ್ನು ಅಳವಡಿಸಿಕೊಂಡಿವೆ. ಉಳಿದ 54 ಕಾರ್ಖಾನೆಗಳು ಮುಂದಿನ ಹದಿನೈದು ದಿನಗಳಲ್ಲಿ ಡಿಜಿಟಲ್ಗೆಯ ಪರಿವರ್ತನೆ ಆಗಬೇಕು ಎಂದರು.

ರೈತರು, ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಯಾವುದೇ ಕಾರಣಕ್ಕೂ ಮೋಸ ಆಗಬಾರದು. ರೈತರ ಗದ್ದೆಗಳಿಂದ ಲಾರಿಯಲ್ಲಿ ಎಷ್ಟು ಕಬ್ಬು ಬಂದಿರುತ್ತದೆಯೋ ಅಷ್ಟೇ ತೂಕದ ಕಬ್ಬು ಕಾರ್ಖಾನೆಗಳಲ್ಲಿ ತೂಕ ಮಾಡಿದಾಗಲೂ ಬರಬೇಕು. ಸರಿಯಾಗಿ ತೂಕ ಮಾಡದಿದ್ದರೆ, ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯ ಆಗಲಿದೆ ಎಂದರು.

ಡಿಜಿಟಲ್ ತೂಕ ಯಂತ್ರಗಳ ಅಳವಡಿಕೆಗೆ ಸಂಬಂಧಿಸಿದಂತೆ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗಗಳ ಮಾಪನಶಾಸ್ತ್ರ ಇಲಾಖೆಯ ಜಂಟಿ ನಿರ್ದೇಶಕರು, ಉಪನಿರ್ದೇಶಕರು, ನಿಯಂತ್ರಕರು ಸೇರಿದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

Leave a Reply