ಯಾದಗಿರಿಯಲ್ಲಿ ಐಸಿಸ್ ಉಗ್ರರ ಜಾಡು ಹಿಡಿದು ಹುಡುಕಾಟ

2 years ago

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯ ನಡೆಸಲು ಐಸಿಸ್ ಉಗ್ರರು ಸಂಚು ನಡೆಸಿದ್ದಾರೆ ಎಂಬ ಗುಪ್ತದಳದ ವರದಿ ಹಿನ್ನೆಲೆಯಲ್ಲಿ ಐಸಿಸ್ ಜೊತೆ ನಂಟು ಹೊಂದಿರುವರ ವ್ಯಕ್ತಿಗಳ ಹುಡುಕಾಟದಲ್ಲಿ ರಾಷ್ಟ್ರೀಯ ಭದ್ರತಾ ದಳ ತೊಡಗಿದೆ. ಇದರ ಬೆನ್ನಲ್ಲೇ ಕರ್ನಾಟಕದಿಂದ ಪಾಕಿಸ್ತಾನಕ್ಕೆ ಸ್ಯಾಟಲೈಟ್ ಪೋನ್ ಕರೆ ಮಾಡಿರುವ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಕರೆಯ ಜಾಡು ಬೆನ್ನುಹತ್ತಿ ಯಾದಗಿರಿಗೆ ತೆರಳಿರುವ ಎನ್.ಐ.ಎ.ತಂಡ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಜಿಪಿಎಸ್ ಲೊಕೇಷನ್ ಆಧರಿಸಿ ಹುಡುಕಾಟ ನಡೆಸಿದೆ.

ಯಾದಗಿರಿ ತಾಲೂಕಿನ ಶೆಳ್ಳಗಿ ಗ್ರಾಮದಿಂದ ಪಾಕಿಸ್ತಾನಕ್ಕೆ ಸೆಪ್ಟೆಂಬರ್ 17ರ ನಸುಕಿನ ಜಾವ 3 ಗಂಟೆ ಸುಮಾರಿಗೆ ಸ್ಯಾಟಲೈಟ್ ಕರೆ ಹೋಗಿರುವ ಬಗ್ಗೆ ಮಾಹಿತಿ ಪಡೆದಿರುವ ತನಿಖಾ ತಂಡ, ಈ ಬಗ್ಗೆ ಪರಿಶೀಲಿಸುತ್ತಿದೆ.

ಚೀನಾ ನಿರ್ಮಿತ ಸ್ಯಾಟಲೈಟ್ ಪೋನ್ ನಿಂದ ಪಾಕಿಸ್ತಾನಕ್ಕೆ ಕರೆ ಮಾಡಲಾಗಿದೆ ಎಂದು ವರದಿಯಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಇದೇ ಗ್ರಾಮದಿಂದ ಪಾಕಿಸ್ತಾನಕ್ಕೆ ಸ್ಯಾಟಲೈಟ್ ಪೋನ್ ಕರೆ ಮಾಡಲಾಗಿತ್ತು ಎಂಬ ಮಾಹಿತಿ ಆಧಾರದಲ್ಲಿ ತನಿಖೆ ನಡೆಸಲಾಗಿತ್ತು.

Leave a Reply