ಕಲಬುರಗಿ ರೆಡ್ ಕ್ರಾಸ್‌ ಸಂಸ್ಥೆಯಿಂದ ಉತ್ತಮ ಕಾರ್ಯ

2 years ago

ಕಲಬುರಗಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕಲಬುರಗಿ ಶಾಖೆಯಿಂದ 2020-21ನೇ ಸಾಲಿನಲ್ಲಿ ಕೈಗೊಂಡ ಅತ್ಯುತ್ತಮ ಸಮಾಜ ಮುಖಿ ಕಾರ್ಯ ಪರಿಗಣಿಸಿ ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕಲಬುರಗಿ ಜಿಲ್ಲಾಧಿಕಾರಿ ಮತ್ತು ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷೆ ಬಿ.ಫೌಜಿಯಾ ತರನ್ನುಮ್ ಅವರಿಗೆ ಪ್ರಥಮ ಬಹುಮಾನದ ಪ್ರಶಸ್ತಿ ನೀಡಿ ಗೌರವಿಸಿದರು.

ಗಾಜಿನ ಮನೆಯಲ್ಲಿ ನಡೆದ ಕರ್ನಾಟಕ ಶಾಖೆಯ ಸರ್ವ ಸದಸ್ಯರ ಸಭೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯಾಧ್ಯಕ್ಷರಾಗಿರುವ ಥಾವರ್ ಚಂದ್ ಗೆಹ್ಲೋಟ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕರ್ನಾಟಕ ಶಾಖೆಯ ರಾಜ್ಯ ಸಭಾಪತಿ ವಿಜಯಕುಮಾರ್ ಪಾಟೀಲ್ ಸಾವಂತ್ಗೆರಾ ಅವರಿಂದ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಯಾಗಿರುವ ಅಪ್ಪಾರಾವ ಅಕ್ಕೋಣೆ ಅವರೊಂದಿಗೆ ಜಿಲ್ಲಾಧಿಕಾರಿಗಳು ಪ್ರಶಸ್ತಿ ಪಡೆದರು.

ಕಲಬುರಗಿ ರೆಡ್ ಕ್ರಾಸ್ ಸಂಸ್ಥೆಯ ಉಪ ಸಭಾಪತಿ ಅರುಣಕುಮಾರ್ ಲೋಯಾ, ಕಾರ್ಯದರ್ಶಿ ರವೀಂದ್ರ ಶಾಬಾದಿ, ಖಜಾಂಚಿ ಭಾಗ್ಯಲಕ್ಷ್ಮಿ, ಪದ್ಮಣ್ಣ ರಾಸಣಗಿ, ಜಯಪ್ರಕಾಶ ಕಟ್ಟಿಮನಿ ಮುಂತಾದವರು ಹಾಜರಿದ್ದರು.

Leave a Reply