ದಾವಣಗೆರೆ: ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ, ಸಹಕಾರ ಇಲಾಖೆ ದಾವಣಗೆರೆ ಇವರುಗಳ ಸಹಯೋಗದೊಂದಿಗೆ ಡಿ.16 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹೈಸ್ಕೂಲ್ ಮೈದಾನದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, (ಡಯೆಟ್) ಇಲ್ಲಿ ಪ್ರಸಕ್ತ ಸಾಲಿನ ಪ್ರೌಢಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರುಗಳಿಗೆ ಪ್ರಬಂಧ ಸ್ಪರ್ಧೆಯನ್ನು ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರುಗಳಿಗೆ ಚರ್ಚಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಪ್ರಬಂಧ ಸ್ಪರ್ಧೆ ಹಾಗೂ ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿ ವಿದ್ಯಾರ್ಥಿನಿಯರುಗಳಿಗೆ ಬಹುಮಾನ ವಿತರಣಾ ಸಮಾರಂಭವನ್ನು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಸಿರಿಗೆರೆ ರಾಜಣ್ಣ ಅಧ್ಯಕ್ಷತೆಯಲ್ಲಿ ಜರುಗಿಸಲಾಗುವುದು. ಹಾಗೂ ಪ್ರಬಂಧ ಸ್ಪರ್ಧೆ ಮತ್ತು ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ವಿದ್ಯಾರ್ಥಿ ವಿದ್ಯಾರ್ಥಿನಿಯರು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಗುವುದು.
ಚರ್ಚಾ ಸ್ಪರ್ಧೆಯ ವಿಷಯ: ಬಡತನ ನಿರ್ಮೂಲನೆ, ಉದ್ಯೋಗ ಸೃಷ್ಟಿ, ಸಾಮಾಜಿಕ ನ್ಯಾಯ ವಿತರಣೆಗಳು ಸಹಕಾರಿ ವಲಯದಿಂದ ಮಾತ್ರವೇ ಜಾರಿಗೊಳಿಸಲು ಸಾಧ್ಯ
ಪ್ರಬಂಧ ಸ್ಪರ್ಧೆಯ ವಿಷಯ: ರಾಷ್ಟ್ರದ ಅರ್ಥವ್ಯವಸ್ಥೆಯ ಬೆಳವಣಿಗೆಗಳಲ್ಲಿ ಸಹಕಾರಿ ವಲಯದ ಪಾತ್ರ
ಹೆಚ್ಚಿನ ಮಾಹಿತಿಗಾಗಿ 8971009568 ,8073317302, 99861 73736 ಸಂಪರ್ಕಿಸಲು ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ ಮುಖ್ಯಕಾರ್ಯನಿರ್ವಹಣಾಧಿಕಾರಿ ಮಂಗಳಗೌಡ ದಾನಪ್ಪಗೌಡ್ರ ತಿಳಿಸಿದ್ದಾರೆ.




