ಸಿಎಂ ಆಪ್ತ ಸಹಾಯಕ ಹೆಸರಿನಲ್ಲಿ ಸೋಗು ಹಾಕಿದ್ದ ವ್ಯಕ್ತಿಯ ಬಂಧನ

2 years ago

ಬೆಂಗಳೂರು: ಸಿಎಂ ಆಪ್ತ ಸಹಾಯಕ ಎಂದು ಹೇಳಿಕೊಂಡು ಸರ್ಕಾರಿ ಮಹಿಳಾ ಅಧಿಕಾರಿಗಳ ಮಾಹಿತಿ ಕಲೆ ಹಾಕುತ್ತಿದ್ದ ಖದೀಮನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ವಿಕ್ರಂ ಗೋಪಾಲಸ್ವಾಮಿ ಬಂಧಿತ ಆರೋಪಿ. ಮುಖ್ಯಮಂತ್ರಿ ಕಾರ್ಯದರ್ಶಿ ಪಿಎ, ಕಂದಾಯ ಸಚಿವರ ಪಿಎ ಎಂದು ಹೇಳಿಕೊಂಡು ಓಡಾಡುತ್ತಿದ್ದ ಆರೋಪಿ ಡಿಜಿ ಕಚೇರಿ, ಕಮಿಷನರ್ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಹೇಳಿ ಕಂದಾಯ ಇಲಾಖೆಯ ಮಹಿಳಾ ಅಧಿಕಾರಿಗಳ ಬಗ್ಗೆ ವಿವರ ಕಲೆ ಹಾಕುತ್ತಿದ್ದ.

ಆರೋಪಿ ಮಾಹಿತಿ ಕಲೆಹಾಕುವುದನ್ನು ಗಮನಿಸಿ ಅಧಿಕಾರಿಯೊಬ್ಬರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ಆರೋಪಿ ವಿಕ್ರಂ ಗೋಪಾಲಸ್ವಾಮಿಯನ್ನು ಬಂಧಿಸಿ ನಡೆಸಿದ ವಿಚಾರಣೆಯಲ್ಲಿ ಆತ ನಿವೃತ್ತ ಅಧಿಕಾರಿ ಮಗ ಎಂಬ ವಿಷಯ ಗೊತ್ತಾಗಿದೆ.

ವಿಧಾನಸೌಧ, ಎಂಎಸ್ ಬಿಲ್ಡಿಂಗ್ ನಲ್ಲಿ ಓಡಾಡುತ್ತಿದ್ದ ಆರೋಪಿ ಸರ್ಕಾರಿ ಅಧಿಕಾರಿಗಳ ವಿವರ ತಿಳಿದುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ವಿಧಾನಸೌಧ ಪೊಲೀಸರು ಆರೋಪಿಯನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Leave a Reply