660 ಪಿಎಸ್ಐ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ: ಡಾ.ಜಿ.ಪರಮೇಶ್ವರ್

2 years ago

ಬೆಂಗಳೂರು: ಬಹಳ ದಿನಗಳಿಂದ ನಿರೀಕ್ಷೆಯಲ್ಲಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ನಡೆದ ಲಿಖಿತ ಮರು ಪರೀಕ್ಷೆಗೆ ಯಾವುದೇ ಗೊಂದಲಗಳಿಲ್ಲದೆ ಸುಗಮವಾಗಿ ನಡೆದಿದೆ ಎಂದು ಗೃಹ ಸಚಿವರ ಡಾ.ಜಿ.ಪರಮೇಶ್ವರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಸುಮಾರು 54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯಬೇಕಿತ್ತು, ಅದರಲ್ಲಿ ಶೇ.65 ರಿಂದ 70 ಮಂದಿ ಪರೀಕ್ಷೆ ಬರೆದಿದ್ದಾರೆ. ಲಿಖಿತ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಶೀಘ್ರವಾಗಿ ಮೌಲ್ಯಮಾಪನ ಮಾಡಿ ಆದಷ್ಟು ಬೇಗ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ ಎಂದರು.

ಮೂರನೇ ಹಂತದಲ್ಲಿ ಮತ್ತೆ 660 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದಲೇ ಪರೀಕ್ಷೆ ನಡೆಸಲು ಶೀಘ್ರವೇ ಅಧಿಸೂಚನೆ ಹೊರಡಿಸುವುದಾಗಿ ತಿಳಿಸಿದರು.

403 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಈಗಾಗಲೇ ಅಧಿಸೂಚನೆ ಜಾರಿಯಾಗಿ, ದಾಖಲಾತಿಗಳ ಪರಿಶೀಲನೆ, ದೈಹಿಕ ಪರೀಕ್ಷೆ ನಡೆದಿದೆ. ಲಿಖಿತ ಪರೀಕ್ಷೆ ಮಾತ್ರ ಬಾಕಿಯಿದೆ. ಇದು ಪೂರ್ಣಗೊಂಡರೆ 948 ಪಿಎಸ್ಐಗಳ ನೇಮಕಾತಿಯಾದಂತಾಗುತ್ತದೆ ಎಂದರು.

ಮೂರನೇ ಹಂತದಲ್ಲಿ 660 ಮಂದಿ ಪಿಎಸ್ಐ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆ ಒಪ್ಪಿಗೆ ಪಡೆಯಲಾಗಿದೆ. ಶೀಘ್ರವೇ ಅಸೂಚನೆ ಹೊರಡಿಸಲಾಗುವುದು. ಈ ಎಲ್ಲಾ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಎರಡು ವರ್ಷದಲ್ಲಿ ಪೂರ್ಣಗೊಳಿಸಬೇಕಿದೆ ಎಂದರು.

Leave a Reply