ಬೆಂಗಳೂರು: ಗರಿಷ್ಠ ಐದು ದಿನಗಳವರೆಗೆ ಮಾತ್ರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗುವುದು. ನಗರ ಪ್ರದೇಶಗಳಲ್ಲಿ ವಾರ್ಡ್‌ಗೆ ಒಂದು ಹಾಗೂ ಹಳ್ಳಿಗಳಲ್ಲಿ ಸ್ಥಳೀಯ ಆಡಳಿತದ ತೀರ್ಮಾನದಂತೆ ಸಾರ್ವಜನಿಕ ಗಣೇಶೋತ್ಸವ ನಡೆಸಲು ಅನುಮತಿ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
ಮುಖ್ಯಮಂತ್ರಿ @BSBommai ರವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್-19 ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಸಭೆ ಜರುಗಿತು. (1/2)#KarnatakaFightsCorona pic.twitter.com/ezFe4EnrEB
— CM of Karnataka (@CMofKarnataka) September 5, 2021
ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಉನ್ನತಮಟ್ಟದ ಸಭೆಯಲ್ಲಿ, ರಾಜ್ಯದಲ್ಲಿ 5 ದಿನಗಳವರೆಗೆ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿಯನ್ನು ನೀಡಲಾಗಿದೆ. ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ವಿಧಿಸುವ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲಾಗಿದೆ. ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.




