ಕಾಂಗ್ರೆಸ್ ಗೆಲ್ಲಲ್ಲ, ಗ್ಯಾರಂಟಿ ನಿಲ್ಲಲ್ಲ: ಆರ್.ಅಶೋಕ ಭವಿಷ್ಯ

2 years ago

ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲ್ಲ, ಗ್ಯಾರಂಟಿ ನಿಲ್ಲಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳಿಂದ ಸರ್ಕಾರ ಪಾಪರ್ ಆಗಲಿದೆ ಎಂದು ಸರ್ಕಾರದ ಆರ್ಥಿಕ ಸಲಹೆಗಾರಾದ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಅದೇ ರೀತಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ‌. ಅವರೆಲ್ಲರೂ ಸರಿಯಾಗಿಯೇ ಹೇಳಿದ್ದಾರೆ. ಏಕೆಂದರೆ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದಿಲ್ಲ. ಕಳೆದ ಬಾರಿ ದೃಷ್ಟಿ ಬೊಟ್ಟಿನಂತೆ ಕಾಂಗ್ರೆಸ್ ‌ಒಂದು ಕ್ಷೇತ್ರದಲ್ಲಿ ಗೆದ್ದಿತ್ತು. ಈಗ ಅದನ್ನು ಕೂಡ ಕಳೆದುಕೊಳ್ಳಲಿದೆ ಎಂದು ಭವಿಷ್ಯ ನುಡಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೋದ ಕಡೆಯಲ್ಲೆಲ್ಲ ಅಧಿಕಾರ ಕಳೆದುಕೊಳ್ಳುತ್ತಿದ್ದಾರೆ. ಬಿಹಾರದಲ್ಲಿ ಈಗಾಗಲೇ ಅಧಿಕಾರ ಕಳೆದುಕೊಂಡಿದ್ದಾರೆ. ಮಮತಾ ಬ್ಯಾನರ್ಜಿ, ಅರವಿಂದ ಕೇಜ್ರಿವಾಲ್ ದೂರವಾಗಿದ್ದಾರೆ. ಎಲ್ಲ ಕಡೆ ಇಲ್ಲ ಎಂಬ ಪ್ರತಿಕ್ರಿಯೆ ಬಂದಿದ್ದು, ಕರ್ನಾಟಕದಲ್ಲೂ ಇಲ್ಲ ಎಂಬುದೇ ಗ್ಯಾರಂಟಿಯಾಗಲಿದೆ‌. ಆದ್ದರಿಂದ ಕಾಂಗ್ರೆಸ್ ಗೆಲ್ಲಲ್ಲ, ಗ್ಯಾರಂಟಿ ನಿಲ್ಲಲ್ಲ ಎಂದರು.

ಅನೇಕರು ಬಿಜೆಪಿಗೆ ಬರಲು ಆಸಕ್ತಿ ತೋರಿಸುತ್ತಿದ್ದಾರೆ. ನರೇಂದ್ರ ಮೋದಿಯವರನ್ನು ಮರಳಿ ಪ್ರಧಾನಿಯಾಗಿಸುವುದು ನಮ್ಮ ಗುರಿ ಎಂದರು.

Leave a Reply