ರಾಜಕೀಯ ಕಾರಣಕ್ಕೆ ಮಾಧ್ಯಮಗಳಲ್ಲಿ ದೊಡ್ಡ ಜಾಹೀರಾತು: ಬಿಜೆಪಿ ಆರೋಪ

2 years ago

ಬೆಂಗಳೂರು: ರಾಜಕೀಯ ಕಾರಣಕ್ಕೆ ಮಾಧ್ಯಮಗಳಲ್ಲಿ ದೊಡ್ಡ ಜಾಹೀರಾತು ನೀಡುವ ಮೂಲಕ ರಾಜ್ಯ ಸರ್ಕಾರ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಸರ್ಕಾರ ದಿನ ಪತ್ರಿಕೆಗಳಿಗೆ ಮುಖಪುಟದಲ್ಲಿ ನೀಡಿದ್ದ ಪೂರ್ಣ ಪುಟ ಜಾಹೀರಾತು

ಈ ಕುರಿತಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ನಿಯೋಗ ರಾಜಭವನಕ್ಕೆ ಭೇಟಿ ನೀಡಿ ರಾಜ್ಯ ಸರಕಾರದ ವಿರುದ್ಧ ದೂರು ಸಲ್ಲಿಸಿಕೆ ಮಾಡಿತು.

ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಸರ್ಕಾರಕ್ಕೆ ಬೆಂಬಲ

ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಲು ರಾಜ್ಯದ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡುತ್ತಿದೆ. ಇದಕ್ಕೆ ‌ಕಡಿವಾಣ ಹಾಕಬೇಕೆಂದು ರಾಜ್ಯಪಾಲರಿಗೆ ನಿಯೋಗ ಮನವಿ ಮಾಡಿತು.

ಜಾಗೃತ ಕರ್ನಾಟಕ ವತಿಯಿಂದ ಅಭಿಯಾನ

ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ರೀತಿಯ ಮತ್ತು ಸಂವಿಧಾನಕ್ಕೆ ಅಗೌರವ ತರುವ ಕೆಲಸವನ್ನು ಈ ಜಾಹೀರಾತಿನ ಮೂಲಕ ರಾಜ್ಯದ ಕಾಂಗ್ರೆಸ್ ಸರಕಾರ ಮಾಡಿದೆ ಎಂದು ಆರೋಪಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಸರ್ಕಾರಕ್ಕೆ ಬೆಂಬಲ

‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಶೀರ್ಷಿಕೆಯ ಈ ಜಾಹೀರಾತಿನ ಮೂಲಕ ಕೇಂದ್ರ ಸರಕಾರದ ವಿರುದ್ಧ ದೆಹಲಿ ಚಲೋ ನಡೆಸಲು ಕರೆ ನೀಡಿದ್ದು ಆಘಾತಕರ. ರಾಜ್ಯದ ಜನರನ್ನು ತಪ್ಪು ದಾರಿಗೆಳೆಯುವ ಅಂಕಿಅಂಶಗಳನ್ನು ಈ ಜಾಹೀರಾತು ಒಳಗೊಂಡಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಜಕಾರಣ ಮಾಡಲು ಈ ಜಾಹೀರಾತು ಕೊಟ್ಟಿದ್ದಾರೆ ಎಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಸರ್ಕಾರಕ್ಕೆ ಬೆಂಬಲ

Leave a Reply