ಎಲ್ಲರೂ ವೈಯಕ್ತಿಕ ಹಿತಾಸಕ್ತಿಗಾಗಿ ದೇಶ ವಿಭಜನೆ ಮಾಡಲು ಹೊರಟಿದ್ದಾರೆ: ಆರ್.ಅಶೋಕ

2 years ago

ಬೆಂಗಳೂರು: ರಾಜ್ಯದಲ್ಲಿ ಗೂಂಡಾ ಸರ್ಕಾರವಿದೆ. ಎಲ್ಲರೂ ವೈಯಕ್ತಿಕ ಹಿತಾಸಕ್ತಿಗಾಗಿ ದೇಶ ವಿಭಜನೆ ಮಾಡಲು ಹೊರಟಿದ್ದಾರೆ. ಸಂಸದ ಡಿ.ಕೆ.ಸುರೇಶ್ ಹೇಳಿಕೆ ಸ್ವಾತಂತ್ರ್ಯ ಹೋರಾಟಗಾರರಿಗೆ ಅಪಮಾನ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ವೇಳೆ ಬಂಧನಕ್ಕೊಳಗಾಗಿ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಬಿಡುಗಡೆಯಾದ ಬಳಿಕ ಮಾತನಾಡಿದ ಅವರು, ಸದಾಶಿವನಗರದ ಜನರು ಹೆಚ್ಚು ತೆರಿಗೆ ಕಟ್ಟುತ್ತಾರೆ ಅಂತ ಎಲ್ಲ ಹಣವನ್ನು ಅಲ್ಲಿಗೆ ಕೊಡಬೇಕೆಂದರೆ ವಿದ್ಯಾರ್ಥಿಗಳು, ಕೊಳೆಗೇರಿಗಳ ಕಥೆ ಏನಾಗುತ್ತದೆ ಎಂದು ಚಿಂತಿಸಬೇಕು. ಮುಖ್ಯಮಂತ್ರಿಗೆ ಧಮ್ ಇದ್ದರೆ ಇತ್ತೀಚೆಗೆ ಪ್ರಧಾನಿ ಬಂದಾಗ ಅವರ ಮುಂದೆ ತೋರಿಸಬೇಕಿತ್ತು. ಆಗ ನಮಸ್ಕಾರ ಹೇಳಿಕೊಂಡು ಈಗ ಟೀಕಿಸುತ್ತಾರೆ ಎಂದರು.

ವಿದ್ಯುತ್, ನೀರು ಈಗ ಖಾಲಿಯಾಗಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಬೀಗ ಹಾಕಬೇಕು. ಬಿಜೆಪಿ ಅವಧಿಯಲ್ಲಿ ಎಲ್ಲವೂ ಹೆಚ್ಚುವರಿಯಾಗಿ ನೀಡಲಾಗುತ್ತಿತ್ತು. ಈಗ ಯಾರು ಕಳ್ಳರು ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೇಳಲಿ. ಎನ್ ಡಿಎ ಅವಧಿಯಲ್ಲಿ ಹಾಗೂ ಯುಪಿಎ ಅವಧಿಯಲ್ಲಿ ಎಷ್ಟು ಅನುದಾನ ಬಂದಿದೆ ಎಂದರು.

Leave a Reply