ದರ್ಶನ್ ಫಾರ್ಮ್ ಹೌಸ್ ನಲ್ಲಿ ಅತ್ಯಾಚಾರ!

5 years ago

ಮೈಸೂರು: ನಟ ದರ್ಶನ್ ಒಡೆತನದ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ.

ಟಿ. ನರಸೀಪುರ ರಸ್ತೆಯ ಫಾರ್ಮ್ ಹೌಸ್ ನಲ್ಲಿ ಕೆಲಸ ಮಾಡಿಕೊಂಡಿರುವ ಶಿವಮೊಗ್ಗ ಜಿಲ್ಲೆಯ ಕುಟುಂಬವೊಂದರ ಅಪ್ರಾಪ್ತೆ ಮೇಲೆ ಕಳೆದ ಸೋಮವಾರ ಬಿಹಾರ ಮೂಲದ ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂದು ವರದಿಯಾಗಿದೆ.

ಮೈಸೂರು ಮಹಿಳಾ ಠಾಣೆ ಪೊಲೀಸರಿಗೆ ಬಾಲಕಿಯ ತಾಯಿ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

Leave a Reply