ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ರಾಜೀನಾಮೆ

5 years ago

ಚಂಡೀಗಢ: ಪಂಜಾಬ್ ನಲ್ಲಿ ಕಾಂಗ್ರೆಸ್ ನಾಯಕರಾದ ನವಜೋತ್ ಸಿಂಗ್ ಸಿಧು ಮತ್ತು ಅಮರಿಂದರ್ ಸಿಂಗ್ ಜಗಳ ತಾರ್ಕಿಕ ಅಂತ್ಯಕಂಡಿದ್ದು, ಸಿಎಂ ಸ್ಥಾನಕ್ಕೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ.

ರಾಜ್ಯಪಾಲರನ್ನು ಭೇಟಿಯಾದ ಅಮರಿಂದರ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಸಲ್ಲಿಸಿದ ನಂತರ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು.

ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಮಾತಾಡಿದ್ದೇನೆ. ರಾಜೀನಾಮೆ ನೀಡುವಂತೆ ಸೋನಿಯಾ ಗಾಂಧಿ ಸೂಚಿಸಿದ್ದರು. ಅದರ ಪ್ರಕಾರ ರಾಜೀನಾಮೆ ಸಲ್ಲಿಸಿದ್ದೇನೆ. ಹೈಕಮಾಂಡ್ ಗೆ ಯಾರ ಮೇಲೆ ವಿಶ್ವಾಸವಿದೆಯೋ ಅವರನ್ನು ಮುಂದಿನ ಸಿಎಂ ಆಗಿಸಲಿ ಎಂದರು.

Leave a Reply