ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಅತ್ಯಧಿಕ ಸಂಖ್ಯೆಯಲ್ಲಿ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಬೇಕೆಂದು ರಣತಂತ್ರ ರೂಪಿಸುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರು ಮಂತ್ರಿಗಳು ಮತ್ತು ಪ್ರಭಾವಿ ನಾಯಕರ ಕುಟುಂಬದವರನ್ನು ಕಣಕ್ಕಿಳಿಸಲು ತೀರ್ಮಾನಿಸಿದ್ದಾರೆ.
ಕಳೆದ ರಾತ್ರಿ ಮತ್ತು ಇಂದೂ ಕೂಡ ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದ ಕೇಂದ್ರ ಚುನಾವಣಾ ತಂಡ 21 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿ ಕೇಂದ್ರ ಚುನಾವಣಾ ಸಮಿತಿಗೆ (ಸಿಇಸಿ) ಶಿಫಾರಸು ಮಾಡಲು ನಿರ್ಧರಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಎಐಸಿಸಿ ಸ್ಕ್ರೀನಿಂಗ್ ಸಮಿತಿ ಜೊತೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೆಲವು ಕ್ಷೇತ್ರಗಳಿಗೆ ಪ್ರಭಾವಿ ನಾಯಕರ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸಲು ನಿರ್ಧರಿಸಿದರು.
ರಾಜ್ಯದ ಒಟ್ಟು 28 ಕ್ಷೇತ್ರಗಳ ಪೈಕಿ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಸಿಇಸಿ ಈಗಾಗಲೇ ಪ್ರಕಟಿಸಿದೆ. ಸಂಭವನೀಯ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಸಿದ್ಧಪಡಿಸಿರುವ ಪ್ರತ್ಯೇಕ ಪಟ್ಟಿಗಳ ಕುರಿತು ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ಚರ್ಚಿಸಲಾಯಿತು.
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್, ಚಿಕ್ಕೋಡಿ ಕ್ಷೇತ್ರದಿಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕ ಜಾರಕಿಹೊಳಿ, ಚಾಮರಾಜನಗರ ಕ್ಷೇತ್ರದಿಂದ ಸಚಿವ ಮಹಾದೇವಪ್ಪ ಅವರ ಪುತ್ರ ಸುನಿಲ್ ಬೋಸ್, ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ, ದಾವಣಗೆರೆ ಕ್ಷೇತ್ರದಿಂದ ಸಚಿವ ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾವತಿ ಮಲ್ಲಿಕಾರ್ಜುನ್ ಮತ್ತು ಧಾರವಾಡ ಕ್ಷೇತ್ರದಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನು ಕಣಕ್ಕಿಳಿಸಲು ಸ್ಕ್ರೀನಿಂಗ್ ಕಮಿಟಿ ತೀರ್ಮಾನಿಸಿದೆ
ಬೆಳಗಾವಿಯಿಂದ ತಮ್ಮಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಕಣಕ್ಕಿಳಿಸಲು ಲಕ್ಷ್ಮಿ ಹೆಬ್ಬಾಳ್ಕರ್ ಸಮ್ಮತಿಸಿದರೆ, ಚಿಕ್ಕೋಡಿಯಿಂದ ತಮ್ಮ ಪುತ್ರಿ ಪ್ರಿಯಾಂಕಾ ಅವರನ್ನು ಕಣಕ್ಕಿಳಿಸಲು ಸತೀಶ್ ಜಾರಕಿಹೊಳಿ ಸಮ್ಮತಿಸಿಲ್ಲ. ತಮ್ಮ ಪುತ್ರಿಯ ಬದಲಿಗೆ ಹಿಂದುಳಿದ ಸಮುದಾಯಕ್ಕೆ ಸೇರಿದ ಲಕ್ಷ್ಮಣರಾವ್ ಚಿಂಗಳೆ ಅವರಿಗೆ ಟಿಕೆಟ್ ನೀಡಬೇಕು. ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನನ್ನದು ಎಂದು ಸಚಿವ ಜಾರಕಿಹೊಳಿ ಪಟ್ಟು ಹಿಡಿದಿರುವುದಾಗಿ ಗೊತ್ತಾಗಿದೆ.
ಅದೇ ರೀತಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತಮ್ಮ ಪುತ್ರಿಯನ್ನು ಕಣಕ್ಕಿಳಿಸಲು ಸಚಿವ ರಾಮಲಿಂಗಾರೆಡ್ಡಿ ಸಮ್ಮತಿಸಿಲ್ಲ. ಆದರೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಈ ಇಬ್ಬರಿಗೂ ತಮ್ಮ ಪುತ್ರಿಯರನ್ನು ಕಣಕ್ಕಿಳಿಸಿ ಅವರನ್ನು ಗೆಲ್ಲಿಸಿಕೊಂಡು ಬರಬೇಕು. ಇದು ಪಕ್ಷದ ನಿರ್ಧಾರವಾಗಿದೆ ಎಂದು ಹೇಳಿ ಮನವರಿಕೆ ಮಾಡಿಕೊಡಲು ಪ್ರಯತ್ನ ಮಾಡಿದ್ದಾರೆ. ಇದಕ್ಕೆ ಈ ಇಬ್ಬರೂ ಎರಡು ದಿನದ ಸಮಯಾವಕಾಶ ಕೋರಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಉಡುಪಿ–ಚಿಕ್ಕಮಗಳೂರು, ಚಿಕ್ಕೋಡಿ, ಮೈಸೂರು, ಚಿತ್ರದುರ್ಗ, ರಾಯಚೂರು ಮತ್ತು ಬಳ್ಳಾರಿ ಕ್ಷೇತ್ರಗಳ ಅಭ್ಯರ್ಥಿ ಹೆಸರಿನ ಬಗ್ಗೆ ಗಂಭೀರ ಚರ್ಚೆ ನಡೆದಿದೆ.
ಸಮಿತಿ ಅಧ್ಯಕ್ಷ ಹರೀಶ್ ಚೌಧರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಉಸ್ತುವಾರಿಯೂ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಮಿತಿ ಸದಸ್ಯರಾದ ಜಿಗ್ನೇಶ್ ಮೇವಾನಿ, ವಿಶ್ವಜಿತ್ ಕದಂ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಭೆಯಲ್ಲಿ ಭಾಗವಹಿಸಿದ್ದರು.




