ಅಂಬೇಡ್ಕರ್ ಅವರ ಸಂವಿಧಾನಕ್ಕಿಂತ, ಮಹಿಳೆಯರನ್ನು, ಶೋಷಿತ ವರ್ಗಗಳನ್ನು ಅಸ್ಪೃಶ್ಯರಂತೆ ಕಾಣುವ ಮನುಸ್ಮೃತಿಯೇ ಬಿಜೆಪಿ ಮತ್ತು ಆರೆಸ್ಸೆಸ್’ಗೆ ಶ್ರೇಷ್ಠ: ದಿನೇಶ್ ಗುಂಡೂರಾವ್
ಬೆಂಗಳೂರು: ‘ಸಂವಿಧಾನವನ್ನು ಬದಲಾಯಿಸಲು ನಮಗೆ ಬಹುಮತ ಕೊಡಿ’ ಎಂಬ ಸಂಸದ ಅನಂತ್ ಕುಮಾರ್ ಹೆಗಡೆಯವರ ಮಾತಿಗೆ ಅಚ್ಚರಿಪಡಬೇಕಾದ ಅಗತ್ಯವಿಲ್ಲ. ಏಕೆಂದರೆ ಸಂವಿಧಾನವನ್ನು ಬದಲಾಯಿಸಬೇಕೆನ್ನುವುದು ಬಿಜೆಪಿಯ ಅಜೆಂಡಾವೇ ಆಗಿದೆ. ಬಿಜೆಪಿಯ ಬೆನ್ನ ಹಿಂದೆ ನಿಂತಿರುವ ಆರೆಸ್ಸೆಸ್ ಅಜೆಂಡಾ ಕೂಡ ಅದೇ ಆಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸಂವಿಧಾನ ಬದಲಾವಣೆ ಕುರಿತ ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆಯವರ ಹೇಳಿಕೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ದಿನೇಶ್ ಗುಂಡೂರಾವ್, ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿ, ಸಮಾನತೆಯನ್ನು ಪ್ರತಿಪಾದಿಸುವ ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ಅವರ ಸಂವಿಧಾನಕ್ಕಿಂತ, ಮಹಿಳೆಯರನ್ನು, ಶೋಷಿತ ವರ್ಗಗಳನ್ನು ಅಸ್ಪೃಶ್ಯರಂತೆ ಕಾಣುವ ಮನುಸ್ಮೃತಿಯೇ ಬಿಜೆಪಿ ಮತ್ತು ಆರೆಸ್ಸೆಸ್’ಗೆ ಶ್ರೇಷ್ಠವಾಗಿ ಕಾಣುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಂಸದ Anantkumar Hegde ಯವರನ್ನು ಸದಾ ಪೋಷಿಸುತ್ತಾ ಬಂದಿರುವ ಬಿಜೆಪಿ ಮತ್ತು ಆರೆಸ್ಸೆಸ್ ಈ ಹಿಂದೆ ಅವರು ಸಂವಿಧಾನ ಬದಲಾವಣೆಯ ಮಾತುಗಳನ್ನಾಡಿದಾಗಲೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಇಂದಿನ ಅವರ ಹೇಳಿಕೆಯ ಹಿಂದೆಯೂ ಬಿಜೆಪಿ ಮತ್ತು ಆರೆಸ್ಸೆಸ್ ಕೈವಾಡವಿದೆ ಎಂದಿದ್ದಾರೆ.
ಸಂವಿಧಾನ ಬದಲಾಯಿಸುತ್ತೇವೆ ಎಂಬ ಅನಂತ್ ಕುಮಾರ್ ಹೆಗಡೆಯವರ ಹೇಳಿಕೆ, ಬಿಜೆಪಿಯದ್ದೇ ಹೇಳಿಕೆ ಎಂಬುದನ್ನು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಬಹಿರಂಗವಾಗಿ ಒಪ್ಪಿಕೊಳ್ಳಲಿ ಎಂದು ಸವಾಲೆಸೆದಿದ್ದಾರೆ.




