ಬೆಂಗಳೂರು: ಕರ್ನಾಟಕದಲ್ಲಿನ ಅಂಗಡಿ ಮುಂಗಟ್ಟು ಮತ್ತು ವಾಣಿಜ್ಯ ಕಟ್ಟಡಗಳ ಮೇಲೆ ಪ್ರಧಾನವಾಗಿ ಕಾಣುವಂತೆ ಕನ್ನಡದಲ್ಲೇ ನಾಮಫಲಕ ಹಾಕುವ ಕಾಯಿದೆ ಪಾಲಿಸದವರ ವಿರುದ್ಧ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಕೆಲವು ಷರತ್ತುಗಳನ್ನು ವಿಧಿಸಿದೆ. ನೂತನ ಕಾಯಿದೆ ಅನ್ವಯ ನಾಮಫಲಕ ಹಾಕದ ಅಂಗಡಿ ಮುಂಗಟ್ಟು ಮತ್ತು ವಾಣಿಜ್ಯ ಸಂಕೀರ್ಣಗಳನ್ನು ಸೀಸ್ ಮಾಡಬಾರದು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ರಾಜ್ಯದ ವಾಣಿಜ್ಯ ಸಂಸ್ಥೆಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆ ಬಳಿಕ ಆದೇಶ ಅನುಸರಿಸದವರ ಮೇಲೆ ಕ್ರಮ ಕೈಗೊಳ್ಳಲು ಆರಂಭಿಸಿತ್ತು. ಹೀಗಾಗಿ “ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ-2022” ಅನ್ನು ಪ್ರಶ್ನಿಸಿ ರಿಟೇಲರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಹೈಕೋರ್ಟ್ ಮೆಟ್ಟಿಲೇರಿತ್ತು.
ಟೈಟನ್ ಕಂಪನಿ ಲಿಮಿಟೆಡ್ ಹಾಗೂ ಪಿವಿರ್ ಐನಾಕ್ಸ್ ಲಿಮಿಟೆಡ್ ಮತ್ತಿತರ ಕಂಪನಿಗಳು ಕೂಡ ಹೈಕೋರ್ಟ್ ನಲ್ಲಿ ತಕರಾರು ಅರ್ಜಿ ಸಲ್ಲಿಕೆ ಮಾಡಿದ್ದವು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನಿಂದ ರಾಜ್ಯ ಸರ್ಕಾರಕ್ಕೆ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ.
ನಾಮಫಲಕದಲ್ಲಿ ಶೇ.60 ಕನ್ನಡ ಕಡ್ಡಾಯವಾಗಿ ಬಳಸದೇ ಇದ್ದರೆ ಬಲವಂತ ಕ್ರಮ ತೆಗೆದುಕೊಳ್ಳುವಂತಿಲ್ಲ. ಅಂತಹ ವಾಣಿಜ್ಯ ಮಳಿಗೆಯನ್ನು ಸೀಲ್ಡ್ ಡೌನ್ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.



