ಬೆಂಗಳೂರು: 5, 8, 9 and 11 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುತ್ತೇವೆ ಎಂದು ಯಾವುದೇ ಪೂರ್ವಸಿದ್ಧತೆ, ಮುಂದಾಲೋಚನೆ ಇಲ್ಲದೆ ಧಿಡೀರ್ ಆದೇಶ ಹೊರಡಿಸಿದ @INCKarnataka ಸರ್ಕಾರದ ಎಡಬಿಡಂಗಿ ನಿರ್ಧಾರದಿಂದ ವಿದ್ಯಾರ್ಥಿಗಳ ಪರಿಸ್ಥಿತಿ ಅತಂತ್ರವಾಗಿದ್ದು, ಪರೀಕ್ಷೆಗಳ ದಿನಾಂಕ ಪದೇ ಪದೇ ಬದಲಾಗುತ್ತಿರುವುದರಿಂದ ಪೋಷಕರು ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಅವರು, ಶಿಕ್ಷಣ ಇಲಾಖೆ ಇಷ್ಟೊಂದು ದೊಡ್ಡ ಗೊಂದಲದ ಗೂಡಾಗಿರುವ ಸಂದರ್ಭದಲ್ಲಿ ಸಮಸ್ಯೆಗೆ ಪರಿಷ್ಕಾರ ಹುಡುಕಿ ಪೋಷಕರಿಗೆ, ವಿಧ್ಯಾರ್ಥಿಗಳಿಗೆ ಧೈರ್ಯ ತುಂಬುವುದು ಬಿಟ್ಟು, ಸಹೋದರಿಯ ಚುನಾವಣೆಯಲ್ಲಿ ಸಂಪೂರ್ಣ ಮಗ್ನರಾಗಿರುವ ಶಿಕ್ಷಣ ಸಚಿವ @Madhu_Bangarapp ಅವರು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಮುಂದುವರೆಸಿದ್ದಾರೆ ಎಂದಿದ್ದಾರೆ.
ಸಿಎಂ @siddaramaiah ನವರೇ, ನಿಮಗೆ ರಾಜ್ಯದ ಮಕ್ಕಳ ಭವಿಷ್ಯಕ್ಕಿಂತ ಚುನಾವಣೆಯೇ ಮುಖ್ಯವಾದರೆ ಶಿಕ್ಷಣ ಸಚಿವರಿಂದ ರಾಜೀನಾಮೆ ಪಡೆದು ಫುಲ್ ಟೈಮ್ ಪಕ್ಷದ ಕೆಲಸ ಮಾಡಲು ಹೇಳಿ. ಕಳೆದ 9 ತಿಂಗಳಿನಿಂದ ಪದೇ ಪದೇ ಎಡವಟ್ಟುಗಳ ಮೇಲೆ ಎಡವಟ್ಟುಗಳನ್ನು ಮಾಡುತ್ತಿದ್ದರೂ ಶಿಕ್ಷಣ ಸಚಿವರ ಮೇಲೆ ಯಾವ ಕ್ರಮ ಕೈಗೊಳ್ಳಲಾಗದ ನಿಮ್ಮ ಪರಿಸ್ಥಿತಿ ನೋಡಿದರೆ ತಾವು ಅಸಹಾಯಕರಾಗಿದ್ದೀರಿ ಅನ್ನಿಸುತ್ತಿದೆ ಎಂದಿದ್ದಾರೆ.



