ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ತಡೆಯಲು ನಿಯೋಜನೆಗೊಂಡಿರುವ ವಿವಿಧ ತನಿಖಾ ತಂಡಗಳು ರಾಜ್ಯದಲ್ಲಿ 5.85 ಕೋಟಿ ರು. ನಗದು ಸೇರಿ 7 ಕೋಟಿ ಮೌಲ್ಯದ ವಿವಿಧ ವಸ್ತುಗಳನ್ನು ಜಪ್ತಿ ಮಾಡಿವೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 5.85 ಕೋಟಿ ರೂಪಾಯಿ ನಗದು, 5.87 ಲಕ್ಷ ರೂ ಮೌಲ್ಯದ ಉಚಿತ ಉಡುಗೊರೆಗಳು, 6.84 ಲಕ್ಷ ರೂ ಮೌಲ್ಯದ 21.48 ಲಕ್ಷ ಲೀಟರ್ ಮದ್ಯ, 15.21 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. 4.50 ಲಕ್ಷ ಮೌಲ್ಯದ ಚಿನ್ನ, 6.10 ಲಕ್ಷ ಮೌಲ್ಯದ ಎರಡು ಕೆಜಿ ಬೆಳ್ಳಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ಮಾಹಿತಿ ನೀಡಿದೆ.
ನಗದು, ಮದ್ಯ, ಮಾದಕ ವಸ್ತುಗಳು, ಉಚಿತ ಉಡುಗೊರೆಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 205 ಎಫ್ಐಆರ್ ದಾಖಲಿಸಲಾಗಿದೆ.
ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಧೂಳಖೇಡ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೇ ಸಾಗಿಸ್ತಿದ್ದ 4.5 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರದ ರೋಶನ ಗಜಾನನ ಎಂಬಾತ ವಿಜಯಪುರಕ್ಕೆ ಹಣ ತರುವಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ಬಳ್ಳಾರಿಯಿಂದ ಆಂಧ್ರದ ಅದೋನಿ ಕಡೆ ಸಾಗಿಸುತ್ತಿದ್ದ ದಾಖಲೆ ರಹಿತ 26 ಕೆಜಿ ಬೆಳ್ಳಿ, 3 ಲಕ್ಷ 55 ಸಾವಿರ ನಗದು ಜಪ್ತಿ ಮಾಡಲಾಗಿದೆ.ಮೋಕಾ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೇ ದಿನ 23,62,750 ರೂಪಾಯಿ ಅಕ್ರಮ ಹಣವನ್ನ ಜಪ್ತಿ ಮಾಡಿಕೊಳ್ಳಲಾಗಿದೆ. ಕಡೂರು ತಾಲೂಕಿನಿಂದ ಹಾಸನದ ಅರಸೀಕೆರೆಗೆ ಸಾಗಿಸುತ್ತಿದ್ದ ಬರೋಬ್ಬರಿ 20 ಲಕ್ಷ ಹಣವನ್ನು ಸೀಜ್ ಮಾಡಲಾಗಿದೆ. ಚೌಡಿಪಾಳ್ಯ ಚೆಕ್ ಪೋಸ್ಟ್ ನಲ್ಲಿ ವಶಕ್ಕೆ ಪಡೆಯಲಾಗಿದೆ
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ಹಕ್ಕಿಪಿಕ್ಕಿ ಕಾಲೋನಿ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1,50,250 ರೂಪಾಯಿ ಹಣ ಹಾಗೂ ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ.
ಚಿತ್ರದುರ್ಗ ನಗರದ ಜೆ ಎಂಐಟಿ ಬಳಿಯ ಚೆಕ್ ಪೋಸ್ಟ್ ಬಳಿ ಬ್ಯಾಗ್ ಗಳಲ್ಲಿ ಸಾಗಿಸುತ್ತಿದ್ದ 108ಕ್ಕೂ ಹೆಚ್ಚು ಸೀರೆಗಳನ್ನ ವಶಕ್ಕೆ ಪಡೆಯಲಾಗಿದೆ.
ತುಮಕೂರು ಜಿಲ್ಲೆಯ ಕುಣಿಗಲ್ ನ 22ನೇ ವಾರ್ಡ್ ಮಲ್ಲಿಪಾಳ್ಯದಲ್ಲಿ ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಬೆಟ್ಟಸ್ವಾಮಿ ಎಂಬಾತನಿಗೆ ಸೇರಿದ ಗೋದಾಮಿನಲ್ಲಿಟ್ಟಿದ್ದ 80ಕ್ಕೂ ಹೆಚ್ಚು ಕುಕ್ಕರ್ ಗಳನ್ನು ವಶಕ್ಕೆ ಪಡೆಯಲಾಗಿದೆ.. ಈ ಕುಕ್ಕರ್ಗಳ ಮೇಲೆ ಸಿಎಂ, ಡಿಸಿಎಂ ಡಿಕೆ, ಸಂಸದ ಡಿ.ಕೆ ಸುರೇಶ್, ಶಾಸಕ ಡಾ.ರಂಗನಾಥ್ ಭಾವಚಿತ್ರ ಅಂಟಿಸಲಾಗಿದೆ.




