ಬೆಂಗಳೂರು: ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಡೀಸೆಲ್ – ಪೆಟ್ರೋಲ್ – ಗ್ಯಾಸ್ ಬೆಲೆ ಕಡಿಮೆ ಮಾಡ್ತೀವಿ ಅಂದ್ರು ಮಾಡಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಅಂದ್ರು ಸೃಷ್ಟಿಸಿದ್ರಾ? ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ್ರು ಹಾಕಿದ್ರಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕೆಪಿಸಿಸಿ ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲೆ, ತಾಲ್ಲೂಕು ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾವು Bharatiya Janata Party (BJP) ಅವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡುವುದಿಲ್ಲ – ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದರು.
ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು Narendra Modi ಅವರು. ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ ಎಂದರು.
ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲಾ ಧರ್ಮ, ಎಲ್ಲಾ ಜಾತಿ, ಎಲ್ಲಾ ವರ್ಗದವರಿಗೆ ಸೇರಿವೆ. ಸರ್ವರನ್ನೂ ಸಮಾನವಾಗಿ ಕಾಣುವ ಕಾರ್ಯಕ್ರಮಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ರೂಪಿಸಿ ಜಾರಿ ಮಾಡುತ್ತಿದೆ. ಇವೆಲ್ಲವನ್ನೂ ನೀವುಗಳು ನಾಡಿನ ಜನರಿಗೆ ಸರಿಯಾಗಿ ಅರ್ಥ ಮಾಡಿಸಿ ಬಿಜೆಪಿಯ ಸುಳ್ಳುಗಳಿಗೆ ಸತ್ಯದ ದಾಖಲೆಗಳನ್ನು ಮಂಡಿಸಬೇಕು ಎಂದು ಕರೆನೀಡಿದರು.
ನಮ್ಮ ಸರ್ಕಾರದ ಗ್ಯಾರಂಟಿಗಳನ್ನು, ನಮ್ಮ ಸಾಧನೆಗಳನ್ನು ಬಿಜೆಪಿ ಸಾಧನೆ ಎಂದು ಹಳ್ಳಿ ಹಳ್ಳಿಗಳಲ್ಲಿ ಅವರು ನಿರಂತರವಾಗಿ, ನಿರ್ಲಜ್ಜದಿಂದ ಸುಳ್ಳು ಹೇಳುತ್ತಿದ್ದಾರೆ. ನಾಡಿನ ಜನರ ಜೇಬಿಗೆ, ಮಹಿಳೆಯರ ಖಾತೆಗೆ ಹಣ ಹಾಕುತ್ತಿರುವುದು ನಮ್ಮ ಕಾಂಗ್ರೆಸ್ ಸರ್ಕಾರ. ನಮ್ಮ ನಾಡಿನ ಜನತೆಗೆ, ಮಹಿಳೆಯರಿಗೆ, ಯುವ ಸಮೂಹಕ್ಕೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುತ್ತಿರುವುದು ನಮ್ಮ ಕಾಂಗ್ರೆಸ್ ಸರ್ಕಾರ ಎಂದರು.
ಆದರೆ ಬಿಜೆಪಿಯವರು ಮಾಮೂಲಿಯಂತೆ ಸುಳ್ಳು ಹೇಳುತ್ತಾ ನಮ್ಮ ಕಾರ್ಯಕ್ರಮಗಳನ್ನು ಅವರ ಕಾರ್ಯಕ್ರಮ ಎಂದು ಹೇಳಿಕೊಳ್ಳುವ ಅಪಾಯ ಇದೆ. ಈ ಸುಳ್ಳುಗಳನ್ನು ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಸಮರ್ಥವಾಗಿ ಎದುರಿಸಿ ಜನರಿಗೆ ಸತ್ಯ ತಿಳಿಸಬೇಕು ಎಂದರು.
ಕರ್ನಾಟಕ ರಾಜ್ಯದಿಂದ ನಾವು 4 ಲಕ್ಷದ 50 ಸಾವಿರ ಕೋಟಿ ತೆರಿಗೆಯನ್ನು ಕೇಂದ್ರಕ್ಕೆ ಕಟ್ಟುತ್ತೇವೆ. ಆದರೆ, ಕೇಂದ್ರ ವಾಪಾಸ್ ರಾಜ್ಯಕ್ಕೆ ವಾಪಾಸ್ ಕೊಡುತ್ತಿರುವುದು ಕೇವಲ 50 ಸಾವಿರ ಕೋಟಿ. ಈ ಅನ್ಯಾಯವನ್ನೇ ನ್ಯಾಯ ಎಂದು ಬಿಜೆಪಿ-ಜೆಡಿಎಸ್ ನವರು ಡ್ಯಾನ್ಸ್ ಮಾಡುತ್ತಿದ್ದಾರೆ. ಆದರೆ ನೀವುಗಳು ಬಿಜೆಪಿ-ಜೆಡಿಎಸ್ ನವರು ಅನ್ಯಾಯವನ್ನು ಬೆಂಬಲಿಸುತ್ತಿರುವುದನ್ನು ನಮ್ಮ ನಾಡಿನ ಜನರಿಗೆ ಅರ್ಥ ಮಾಡಿಸಬೇಕು ಎಂದು ಸಲಹೆ ನೀಡಿದರು.




