ರಾಜ್ಯದಲ್ಲಿ ‘ಸ್ಪೆಷಲ್ ಎಜುಕೇಷನ್ ಜೋನ್’

5 years ago

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅಡಿಯಲ್ಲಿ ರಾಜ್ಯದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಹಿಂದುಳಿದಿರುವ ತಾಲೂಕುವಾರು ‘ಸ್ಪೆಷಲ್ ಎಜುಕೇಷನ್ ಜೋನ್’ ರಚಿಸಲು ಗಂಭೀರ ಚಿಂತನೆ ನಡೆಸಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಮದನ ಗೋಪಾಲ್ ಅಧ್ಯಕ್ಷತೆಯ ಕಾರ್ಯಪಡೆ ಸಭೆ ಸೇರಿ, ‘ಸ್ಪೆಷಲ್ ಎಜುಕೇಷನ್ ಜೋನ್’ ರಚಿಸುವ ಕುರಿತು ತೀರ್ಮಾನಿಸಿದೆ.

ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದಿರುವ ತಾಲೂಕುವಾರು ವಿಶೇಷ ಶೈಕ್ಷಣಿಕ ವಲಯ ರಚನೆ ಮಾಡುವುದು, ತಾಲೂಕು ಮಟ್ಟದ ಸ್ಪೆಷಲ್ ಜೋನ್ನಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಸಂಬಂಧ ಮೂಲ ಸೌಕರ್ಯ ಒದಗಿಸಿ ಶಿಕ್ಷಣ ಕ್ಷೇತ್ರದಲ್ಲಿ ಎಲ್ಲಾ ತಾಲೂಕುಗಳು ಸಮಾನತೆ ಸಾಧಿಸಲು ಚಿಂತಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಹೆಚ್ಚು ಇರುವ ತಾಲೂಕುಗಳಿಗೆ ಹೆಚ್ಚು ಆದ್ಯತೆ ನೀಡಲು ಕಾರ್ಯಪಡೆ ಚಿಂತನೆ ನಡೆಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ತರುವ ಸಂಬಂಧ ಉಪ ಸಮಿತಿ ರಚನೆ ಮಾಡಲಾಗಿದ್ದು, ಎನ್ಇಪಿ ಕಾರ್ಯಪಡೆ ಸಭೆಯಲ್ಲಿ ಕೈಗೊಂಡ ತೀರ್ಮಾನ ಚರ್ಚೆ ಕುರಿತು ಕಾರ್ಯಪಡೆ ಮುಖ್ಯಸ್ಥ ಎಂ.ಮದನ್ ಗೋಪಾಲ್ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ.

ಅವರ ಪ್ರಕಾ, ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶಗಳನ್ನು ಗುರುತಿಸಿ ವಿಶೇಷ ಶಿಕ್ಷಣ ವಲಯ ಎಂದು ಗುರುತಿಸಲು ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರಸ್ತಾಪಿಸಲಾಗಿದೆ. ಕಾರ್ಯಪಡೆ ಮೊದಲ ಸಭೆಯಲ್ಲಿ ಈ ಕುರಿತು ಚರ್ಚಿಸಿದ್ದುದ್ದು, ರಾಜ್ಯದಲ್ಲಿ ತಾಲೂಕುವಾರು ವಿಶೇಷ ಶೈಕ್ಷಣಿಕ ವಲಯ ರಚನೆ ಸಂಬಂಧ ತಾಲೂಕುಗಳನ್ನು ಗುರುತಿಸಲು ಉಪ ಸಮಿತಿ ರಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Leave a Reply