ರಾಜ್ಯದಲ್ಲಿ 4 ದಿನ ಮಳೆ ಸಾಧ್ಯತೆ

5 years ago

ಬೆಂಗಳೂರು: ಶಾಹೀನ್ ಚಂಡಮಾರುತದ ಪರಿಣಾಮದಿಂದ ರಾಜ್ಯದಲ್ಲಿ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ. 5 ಮತ್ತು 6ರಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಕ್ಟೋಬರ್ 5ರಂದು ಯೆಲ್ಲೋ ಅಲರ್ಟ್, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಅಕ್ಟೋಬರ್ 6ರಂದು ಆರೆಂಜ್ ಅಲರ್ಟ್, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಅಂತ್ಯವಾಗಿದೆ. ಆದರೆ ಚಂಡಮಾರುತದಿಂದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ.

Leave a Reply