ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಿದವರನ್ನು ಕಾಂಗ್ರೆಸ್ಗೆ ಸೇರಿಸಿಕೊಂಡರು. ವಿಧಾನಸಭೆಯಲ್ಲಿ ಟಿಕೆಟ್ ನೀಡಿ ಗೆಲ್ಲಿಸಿಕೊಂಡರು, ಸಚಿವರನ್ನಾಗಿ ಮಾಡಿದರು. ಆಗಲೂ ನಾನು ವಿರೋಧ ಮಾಡಲಿಲ್ಲ. ಈಗ ಉದ್ದೇಶ ಪೂರ್ವಕವಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಕೆ.ಎಚ್.ಮುನಿಯಪ್ಪ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಕೋಲಾರದಲ್ಲಿ ನಾನು 7 ಬಾರಿ ಗೆದ್ದಿದ್ದೇನೆ. ಅಷ್ಟು ಬಾರಿ ಯಾರು ಗೆದ್ದಿದ್ದಾರೆ ತೋರಿಸಲಿ. ನಾನು ಒಂದು ಜಿಲ್ಲೆಗೆ ಸೀಮಿತವಾದ ನಾಯಕನಲ್ಲ. ನಾನು ರಾಜ್ಯದಾದ್ಯಂತ ನನ್ನದೇ ಆದ ಕಾರ್ಯಕರ್ತರನ್ನು ಹೊಂದಿದ್ದೇನೆ ಎಂದರು.
ರಾಜ್ಯದಲ್ಲಿ ತಲಾ ಎರಡು ಕ್ಷೇತ್ರಗಳಲ್ಲಿ ಎಡಗೈ ಮತ್ತು ಬಲಗೈ ಸಮುದಾಯಕ್ಕೆ ಅವಕಾಶ ನೀಡುವುದು. ಬಾಕಿ ಉಳಿದ ಒಂದು ಕ್ಷೇತ್ರದಲ್ಲಿ ಲಂಬಾಣಿ ಅಥವಾ ಬೋವಿ ಸಮುದಾಯಕ್ಕೆ ಟಿಕೆಟ್ ನೀಡುವುದು ರೂಢಿಯಲ್ಲಿದೆ. ಈ ಬಾರಿ ಬಲಗೈ ಸಮುದಾಯಕ್ಕೆ ಮೂರು ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿದೆ. ಎಡಗೈ ಸಮುದಾಯಕ್ಕೆ ಒಂದು ಕ್ಷೇತ್ರದಲ್ಲಿ ಮಾತ್ರ ಟಿಕೆಟ್ ನೀಡಲಾಗಿದೆ. ನಮ್ಮದು ದೊಡ್ಡ ಸಮುದಾಯ. ಅನ್ಯಾಯವಾಗಲು ಅವಕಾಶ ನೀಡಬೇಡಿ ಎಂದು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ ಎಂದರು.




