ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಭರ್ಜರಿ ರಂಗುಬಂದಿದೆ. ಮೊದಲ ಹಂತದ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಗೆಲುವಿಗೆ ರಣತಂತ್ರ ಹಾಗೂ ಪ್ರಚಾರದ ಕಾರ್ಯಯೋಜನೆ ರೂಪಿಸುವ ಅಖಾಡಕ್ಕೆ ಅಮಿತ್ ಶಾ ಕಾಲಿಟ್ಟಿದ್ದಾರೆ. ನಾಳೆ ಬೆಳಿಗ್ಗೆ ಪಕ್ಷದ ಕೋರ್ ಕಮಿಟಿ ಸದಸ್ಯರು ಹಾಗೂ ಹಿರಿಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.
- ಚಕ್ರವರ್ತಿ ಸೂಲಿಬೆಲೆ ಪೋಸ್ಟ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಮುಖಭಂಗ
- ಲ್ಯಾಪ್ಟಾಪ್ನಲ್ಲಿ ವಾಟ್ಸಪ್ ಕಿರಿಕಿರಿ? ನೋಟಿಫಿಕೇಶನ್ ಮ್ಯೂಟ್ ಮಾಡಲು ಇಲ್ಲಿದೆ ಸರಳ ಹಾದಿ!
- ಚುನಾವಣೆಯಲ್ಲಿ ಸೋಲುವ ಭಯದಿಂದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅನುಮಾನ: ಆರ್.ಅಶೋಕ
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
ನಂತರ ಬೆಳಗಾವಿ, ಬೀದರ್, ಚಿತ್ರದುರ್ಗ, ದಾವಣಗೆರೆ ಲೋಕಸಭಾ ಕ್ಷೇತ್ರಗಳ ಕೋರ್ ಕಮಿಟಿ ಸದಸ್ಯರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಈ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಸ್ಥಳೀಯ ನಾಯಕರು ಬಂಡಾಯ ಸಾರಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಕ್ಷೇತ್ರದ ಮುಖಂಡರ ಜೊತೆಗೆ ಪ್ರತ್ಯೇಕವಾಗಿ ಮಾತನಾಡುತ್ತಿದ್ದಾರೆ.
ಆನಂತರ ಅರಮನೆ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ಹಾಗೂ ಶಕ್ತಿಕೇಂದ್ರ ಪ್ರಮುಖ್ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಸಂಜೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಡಾ.ಸಿ.ಎನ್.ಮಂಜುನಾಥ್ ಅವರ ಪರವಾಗಿ ರೋಡ್ ಶೋನಲ್ಲಿ ಪಾಲ್ಗೊಂಡು ಮತ ಯಾಚನೆ ಮಾಡಲಿದ್ದಾರೆ. ಈ ವೇಳೆ ಅವರಿಗೆ ಕುಮಾರಸ್ವಾಮಿ ಜೊತೆಯಾಗಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಜಂಟಿ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ರಾತ್ರಿ ನಗರಕ್ಕೆ ಆಗಮಿಸಿದ ಶಾ ಅವರು, ಖಾಸಗಿ ಹೋಟೆಲ್ನ ಲ್ಲಿ ವಾಸ್ತವ್ಯ ಹೂಡಿದ್ದಾರೆ. ಇಲ್ಲಿ ಮೊದಲ ಹಂತದ ಚುನಾವಣೆ ಎದುರಿಸುತ್ತಿರುವ ಪಕ್ಷದ ಎಲ್ಲಾ ಅಭ್ಯರ್ಥಿಗಳೊಂದಿಗೆ ಮಾತುಕತೆ ನಡೆಸಿದರು.




