ಬೆಂಗಳೂರು: ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯಾರೇ ಆಗಿದ್ದರೂ ಅವರ ಪರವಾಗಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಇಡೀ ವಿಶ್ವವೇ ಪ್ರಧಾನಿ ನರೇಂದ್ರಮೋದಿ ಅವರ ಕಡೆಗೆ ಅಚ್ಚರಿಯಿಂದ ನೋಡುತ್ತಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಪರವಾಗಿ ಅವಿಶ್ರಾಂತವಾಗಿ ಎಲ್ಲರೂ ದುಡಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ನನಗೆ ಈಗ 81 ವರ್ಷವಾಗಿದ್ದರೂ ಮನೆಯಲ್ಲಿ ಸುಮ್ಮನೆ ಕೂರುವುದಿಲ್ಲ. ರಾಜ್ಯಾದ್ಯಂತ ಪ್ರವಾಸ ಮಾಡಲು ಸಿದ್ದನಿದ್ದೇನೆ. ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವುದಷ್ಟೇ ಮುಂದಿರುವ ಗುರಿ ಎಂದರು.
ಕಾಂಗ್ರೆಸ್ ಸರ್ಕಾರದಿಂದ ನಾಡಿನ ಜನರಿಗೆ ಅನ್ಯಾಯವಾಗಿದ್ದು, ಅದನ್ನು ಮನವರಿಕೆ ಮಾಡಿಕೊಟ್ಟು ಮತದಾರರ ಮನ ಗೆಲ್ಲಿಸಬೇಕು. ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡುವ ಹಣವನ್ನು ಕಾಂಗ್ರೆಸ್ ಸರ್ಕಾರ ನಿಲ್ಲಿಸಿದೆ. ಭಾಗ್ಯಲಕ್ಷ್ಮಿ ಬಾಂಡ್ ನೀಡುತ್ತಿಲ್ಲ. ನೀರಾವರಿ ಯೋಜನೆಗಳು ಸ್ಥಗಿತವಾಗಿವೆ ಎಂದು ಆರೋಪಿಸಿದರು.




