ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 124 ಸೀರೆ (ರೂ.2,79,100 ಮೌಲ್ಯದ) ಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಅಬಕಾರಿ ಪೊಲೀಸ್ ಅಧಿಕಾರಿಗಳಿಂದ 85.38 ಲೀಟರ್ (ರೂ.41946 ಮೌಲ್ಯ) ಮದ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಂದ 8.32 ಲೀಟರ್ (ರೂ.1920 ಮೌಲ್ಯ) ಮದ್ಯ ಸೇರಿದಂತೆ ಒಟ್ಟು 89.70 ಲೀಟರ್ ಮದ್ಯ (ರೂ.43,866 ಮೌಲ್ಯ) ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದು, ಇಲ್ಲಿಯವರೆಗೆ ಒಟ್ಟು 8 ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಜಿಲ್ಲೆಯಾದ್ಯಂತ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು 16 ಫ್ಲೈಯಿಂಗ್ ಸ್ಕ್ವ್ಯಾಡ್, 24 ಎಸ್ಎಸ್ಟಿ ತಂಡ ಮತ್ತು 7 ಅಬಕಾರಿ ತಂಡ ಕಾರ್ಯ ನಿರ್ವಹಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.




