ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಶಾಲಾ ಕಾಲೇಜುಗಳಲ್ಲಿ ಮತ ಯಾಚಿಸಿರುವುದು ಚುನಾವಣಾ ಅಕ್ರಮವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಕಾಲೇಜ್ ಒಂದರಲ್ಲಿ ಬಾಲರಾಜ್ ಅವರು ಮತಯಾಚಿಸುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ದಿನೇಶ್ ಗುಂಡೂರಾವ್, ವಿದ್ಯಾರ್ಥಿಗಳನ್ನು ಚುನಾವಣಾ ಪ್ರಚಾರಕ್ಕೆ ಬಳಸುವುದು, ರಾಜಕೀಯ ಚಟುವಟಿಕೆಗಳಿಗೆ ಬಳಸುವ ಮೂಲಕ ಚುನಾವಣಾ ಅಕ್ರಮಗಳನ್ನು ನಡೆಸುವುದು, ನೀತಿ ಸಂಹಿತೆ ಉಲ್ಲಂಘಿಸುವುದು ಬಿಜೆಪಿಗೆ ಹೊಸದೇನಲ್ಲ ಎಂದಿದ್ದಾರೆ.
ಕೇಂದ್ರ ಬಿಜೆಪಿ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ದೇಶದ ಯುವಕರಿಗೆ ದ್ರೋಹ ಬಗೆದಿದೆ. ವಿದ್ಯಾವಂತ ಯುವಕರು ಪಕೋಡ ಮಾರಾಟ ಮಾಡುವಂತೆ ಸಲಹೆ ನೀಡಿದವರು ಇಂದು ಕಾಲೇಜುಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಯುವಕರ ಬೆಂಬಲ ಕೇಳುತ್ತಿದ್ದಾರೆ. ಈ ಬಿಜೆಪಿಯವರಿಗೆ ನೈತಿಕತೆ ಇದೆಯಾ? ಇಂದು ಪ್ರಶ್ನಿಸಿದ್ದಾರೆ.
ಚುನಾವಣಾ ಆಯೋಗ ಈ ಕೂಡಲೇ ಎಚ್ಚೆತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತೇನೆ ಎಂದು ಆಗ್ರಹಿಸಿದ್ದಾರೆ.




