ಚಿತ್ರದುರ್ಗ: ಬೆಂಗಳೂರಿನಿಂದ ಗೋಕರ್ಣಕ್ಕೆ ವೇಗವಾಗಿ ಹೋಗುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿ,30 ಮಂದಿ ಗಾಯಗೊಂಡಿರುವ ದಾರುಣ ಘಟನೆ ಹೊಳಲ್ಕೆರೆ ಪಟ್ಟಣದಲ್ಲಿ ಇಂದು ಮುಂಜಾನೆ ನಡೆದಿದೆ.
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
ಅಪಘಾತದಲ್ಲಿ ಮೃತರ ಪೈಕಿ ಇಬ್ಬರ ಗುರುತು ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಗಣಪತಿ(40) ಹಾಗೂ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಮೂಲದ ಜಗದೀಶ್ ಮೃತಪಟ್ಟವರು. ಮತ್ತಿಬ್ಬರು ಮೃತರ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಗಾಯಗೊಂಡಿರುವ 30 ಮಂದಿ ಪ್ರಯಾಣಿಕರಲ್ಲಿ 8 ಮಂದಿಯ ಸ್ಥಿತಿ ಗಂಭೀರವಾಗಿದ್ದು ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದವರನ್ನು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಶವಾಗಾರಕ್ಕೆ ರವಾನಿಸಲಾಗಿದೆ.



