ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೋಲಾರ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕುತೂಹಲಕರ ಘಟ್ಟ ತಲುಪಿವೆ. ಕೋಲಾರದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಪ್ರಚಾರ ಮಾಡುವುದಿಲ್ಲ ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದರೆ, ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗುವುದಾಗಿ ಮಾಜಿ ಸಚಿವ ರಮೇಶ್ ಕುಮಾರ್ ಘೋಷಣೆ ಮಾಡಿದ್ದಾರೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಸಚಿವ ಮುನಿಯಪ್ಪ ಬಣ ಮತ್ತು ಮಾಜಿ ಸಚಿವ ರಮೇಶ್ ಕುಮಾರ್ ಬಣದ ನಡುವಿನ ಪ್ರತಿಷ್ಠೆ ಮತ್ತು ಹಗ್ಗ ಜಗ್ಗಾಟ ದೆಹಲಿಯ ಅಂಗಳವನ್ನು ತಲುಪಿತ್ತು. ಈ ಇಬ್ಬರು ನಾಯಕರ ಜಟಾಪಟಿ ಹೈಕಮಾಂಡ್ ಗೆ ತಲೆನೋವು ತಂದಿದೆ.
ಇದೀಗ ಮುಂಬರುವ ವಿಧಾನಸಭಾ ಚುನಾವಣೆಗೆ ನಿಲ್ಲುವುದಿಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತಿನಾಗುತ್ತೇನೆ ಎಂದು ರಮೇಶ್ ಕುಮಾರ್ ತಮ್ಮ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ.
ಶ್ರೀನಿವಾಸಪುರದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆಯೇ ಕಲುಷಿತಗೊಂಡಿದೆ. ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ. ರಾಜಕೀಯ ಜೀವನದಲ್ಲಿ ಇಷ್ಟು ವರ್ಷ ನ್ಯಾಯಯುತವಾಗಿ ಬದುಕಿದ್ದೇನೆ ಎಂದರು.
ಹಣ ಪಡೆದು ರಾಜಕೀಯ ಮಾಡಿಲ್ಲ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ನನೆಗೆ ಮೋಸ ಮಾಡಿ ಸೋಲಿಸಿದರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದರು. ಅಧಿಕಾರದಾಸೆಗೆ ಅನೈತಿಕ ರಾಜಕಾರಣ ಮಾಡುತ್ತಿದ್ದಾರೆ. ಅವರು ಸರ್ವನಾಶವಾಗುತ್ತಾರೆ. ಆದರೆ ತಾನು ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ ಎಂದು ಘೋಷಣೆ ಮಾಡಿದರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಮತ ಕೇಳಲು ನಿಮ್ಮ ಮುಂದೆ ಬರುವುದಿಲ್ಲ. ರಮೇಶ್ ಕುಮಾರ್ ಉತ್ತರಾಧಿಕಾರಿಯಾಗಿ ನನ್ನ ಮಗ ಹರ್ಷ ಕೂಡ ಮತ ಕೇಳಲು ಬರುವುದಿಲ್ಲ. ಕಳೆದ ಚುನಾವಣೆಯಲ್ಲಿ ನನ್ನ ಸೋಲಿಗೆ ಕೆಲಸ ಮಾಡಿದ ಕಾಂಗ್ರೆಸ್ ನಾಯಕರಿಗೆ ಯಾವ ಗತಿ ಬರಲಿದೆ ಎಂದು ಕಾದು ನೋಡಿ ಎಂದರು.




