ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಸಹೋದರ ಡಿ.ಕೆ.ಸುರೇಶ್ ಪರವಾಗಿ ರಾಜರಾಜೇಶ್ವರಿ ನಗರದ ಹಲವು ಅಪಾರ್ಟ್ಮೆಂಟ್ಗಳಲ್ಲಿ ನಿವಾಸಿಗಳ ಸಭೆ ನಡೆಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತಯಾಚನೆ ಮಾಡಿದರು.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ನಿಮ್ಮ ಸಮಸ್ಯೆಗಳಿಗೆ ನಾವು ಪರಿಹಾರ ಹುಡುಕಿಕೊಡಬಹುದೇ ಹೊರತು, ದೆಹಲಿಯವರು ಬಂದು ಕೆಲಸ ಮಾಡಿಕೊಡುವುದಿಲ್ಲ.ಮತ ಹಾಕಿ, ಕೆಲಸ ಕೇಳಿ ಎಂದು ಮತದಾರರಲ್ಲಿ ಮನವಿ ಮಾಡಿದರು.
ಬೆಂಗಳೂರಿನಲ್ಲಿ ಬರಪರಿಸ್ಥಿತಿಯಿಂದಾಗಿ 7 ಸಾವಿರ ಬೋರ್ ವೆಲ್ ಗಳು ಬತ್ತಿ ಹೋಗಿವೆ. ಆನೇಕಲ್ ದಕ್ಷಿಣ ಭಾಗದ ಕ್ಷೇತ್ರಗಳಿಗೆ ನೀರು ಪಂಪ್ ಮಾಡಲು ಎದುರಾಗುತ್ತಿರುವ ಸಮಸ್ಯೆ ನನಗೆ ಮಾತ್ರ ಗೊತ್ತಿದೆ. ಆದರೂ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂಬ ಕಾರಣಕ್ಕೆ ನಿರಂತರವಾಗಿ ನೀರು ಪೂರೈಕೆ ಮಾಡುತ್ತಿದ್ದೇವೆ ಎಂದರು.




