ಬೆಂಗಳೂರು: ಜೆಡಿಎಸ್ ಪಕ್ಷದ ಹೆಡ್ಡಾಫೀಸ್ನಂತಿರುವ ಬಿಡದಿ ತೋಟದ ಮನೆಯಿಂದ ಮದ್ಯ ಹಾಗೂ ಬಾಡೂಟದ ಘಮಲು ಹೊರಬರುತ್ತಿದೆಯಂತೆ? ಎಂದು ಕೆಪಿಸಿಸಿ ಹೇಳಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿರುವ ಕಾಂಗ್ರೆಸ್, ಸೋಲಿನ ಭೀತಿಯಿಂದ ಹೊಸ್ತೊಡಕಿನ ಹೆಸರಲ್ಲಿ ಮತದಾರರಿಗೆ, ಕಾರ್ಯಕರ್ತರಿಗೆ ಬಾಡೂಟದ ವ್ಯವಸ್ಥೆ ಮಾಡಿರುವ ಕುರಿತು ಮಾಹಿತಿಗಳಿದ್ದರೂ Chief Electoral Officer Karnataka ಅವರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೂತಿರುವುದೇಕೆ? ಎಂದು ಪ್ರಶ್ನಿಸಿದೆ.
ಸೋಲಿನ ಭಯದಲ್ಲಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮದ್ಯ, ಮಾಂಸದ ರುಚಿ ತೋರಿಸಿ ಮತ ಕೇಳಲು ಮುಂದಾಗಿವೆಯೇ? ಎಂದು ಪ್ರಶ್ನಿಸಿದೆ.
ರಾಮನಗರ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಬಾಡೂಟದ ಆಮಿಷವನ್ನು ತಡೆಯದೇ ವಾಮಮಾರ್ಗದ ಚುನಾವಣೆಗೆ ಬೆಂಬಲ ನೀಡುತ್ತಿದ್ದಾರೆಯೇ? ಎಂದು ಪ್ರಶ್ನಿಸಿದೆ.
ಇದರ ಬೆನ್ನಲ್ಲೇ, ಬಿಡದಿಯ ಸಮೀಪವಿರುವ ಕೇತಗಾನಹಳ್ಳಿಯಲ್ಲಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಗೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು.




