ಬೆಂಗಳೂರು: ರಾಜಧಾನಿ ಬೆಂಗಳೂರಿನ ವೈಟ್ಫೀಲ್ಡ್ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣದ ಪಾತಕಿಗಳನ್ನು ಹೆಡೆಮುರಿ ಕಟ್ಟುವಲ್ಲಿ ತನಿಖಾ ತಂಡಗಳು ಯಶಸ್ವಿಯಾಗಿವೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ರಾಜ್ಯದಲ್ಲಿ ಆತಂಕ ಸೃಷ್ಟಿಸಿದ್ದ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ರಾಷ್ಟ್ರೀಯ ತನಿಖಾ ದಳ ಮತ್ತು ರಾಜ್ಯ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ್ದವು.
ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆಸಿ ತಲೆ ಮರೆಸಿಕೊಂಡಿದ್ದ ಬಾಂಬರ್ ಮುಸಾವೀರ್ ಶಾಜೀಬ್ ಹುಸೇನ್ನನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಾಂಬರ್ ಮುಸಾವೀರ್ ಶಾಜೀಬ್ ಜೊತೆಗೆ, ಬಾಂಬ್ ಇಡುವ ಸಂಚು ರೂಪಿಸಿದ್ದ ಸೂತ್ರಧಾರಿ ಅಬ್ದುಲ್ ಮತೀನ್ ತಾಹಾನನ್ನು ಎನ್ಐಎ ಅಧಿಕಾರಿಗಳು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಆತ ನೀಡಿದ ಸುಳಿವು ಆಧರಿಸಿ ಬಾಂಬ್ ಇಟ್ಟಿದ್ದ ಪಾತಕಿ ಉಗ್ರ ಮುಸಾವೀರ್ ಶಾಜೀಬ್ ಹುಸೇನ್ನನ್ನು ಉತ್ತರ ಭಾರತದ ರಾಜ್ಯವೊಂದರಲ್ಲಿ ಬಂಧಿಸಲಾಗಿದೆ.
ಬಾಂಬ್ ಇಟ್ಟಿದ್ದ ಉಗ್ರನ ಬೆನ್ನು ಹತ್ತಿ ತಮಿಳುನಾಡು, ಒಡಿಶಾ, ಅಸ್ಸಾಂ, ಪಶ್ಚಿಮ ಬಂಗಾಳ ಮುಂತಾದ ರಾಜ್ಯಗಳಲ್ಲಿ ಕಾರ್ಯಾಚರಣೆ ಕೈಗೊಂಡಿದ್ದ ಎನ್ಐಎ ಅಧಿಕಾರಿಗಳು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಾಂಬ್ ಇಟ್ಟ ಬಳಿಕ ಬಾಂಬರ್ ಮುಸಾವೀರ್ ಶಾಜೀಬ್ ತಲೆಮರೆಸಿಕೊಂಡು ತಮಿಳುನಾಡು, ಅಸ್ಸಾಂ, ಪಶ್ಚಿಮ ಬಂಗಾಳ ಮುಂತಾದ ಎನ್ ಐಎ ಅಧಿಕಾರಿಗಳ ಕಣ್ತಪ್ಪಿಸಿ ಓಡಾಡಿದ್ದ ಬಾಂಬರ್ ಮುಸಾವೀರ್ ಶಾಜೀಬ್ ಹುಸೇನ್ ಜೊತೆಗೆ ಮತ್ತೊಬ್ಬ ಉಗ್ರ ಅಬ್ದುಲ್ ಮತೀನ್ ತಾಹಾ ಜೊತೆ ಸಿಕ್ಕಿಬಿದ್ದಿದ್ದಾನೆ.
ಇದಕ್ಕೂ ಮೊದಲು ಶಾಜೀನ್ ಹುಸೇನ್ಗೆ ಬೆಂಗಳೂರಿನಲ್ಲಿ ಕುಮ್ಮಕ್ಕು ನೀಡಿದ್ದ ಮೂವರನ್ನು ಈಗಾಗಲೇ ಬಂಧಿಸಲಾಗಿದೆ. ಮುಸಾವೀರ್ ಹುಸೇನ್ ಶಾಜಿಬ್ನೇ ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಇಐಡಿ) ಸ್ಫೋಟಿಸಿದ್ದು ಎಂಬುದಾಗಿ ಎನ್ಐಎ ಪ್ರಕಟಣೆ ತಿಳಿಸಿತ್ತು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವನಾದ ಮುಸಾವೀರ್ ಹುಸೇನ್ ಶಾಜಿಬ್ ಬಾಂಬಿಟ್ಟವನು ಎಂದು ತನಿಖೆಯಿಂದ ಗೊತ್ತಾಗಿದೆ.
ಅಬ್ದುಲ್ ಮಥೀನ್ ತಾಹಾ ಎಂಬವನು ಕೂಡ ಪ್ರಕರಣದಲ್ಲಿ ಪ್ರಮುಖ ಪಿತೂರಿದಾರನಾಗಿದ್ದಾನೆ. ಮುಜಾಮಿಲ್ ಷರೀಫ್ನು ಬಾಂಬ್ ತಯಾರಿಸಲು ಇವರಿಗೆ ಹಲವು ವಸ್ತುಗಳನ್ನು ಪೂರೈಕೆ ಮಾಡಿದ್ದಾನೆ ಎಂಬುದು ತನಿಖೆಯ ವೇಳೆ ಬಹಿರಂಗವಾಗಿದೆ. ಮುಜಾಮಿಲ್ ಷರೀಫ್ನನ್ನು ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ಮಾಡಲಾಗುತ್ತಿದೆ ಎಂದು ಎನ್ಐಎ ಪ್ರಕಟಣೆ ತಿಳಿಸಿತ್ತು.
ಕಳೆದ ಮಾರ್ಚ್ 1 ರಂದು ವೈಟ್ಫೀಲ್ಡ್ನ ಬ್ರೂಕ್ಫೀಲ್ಡ್ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನರು ಗಾಯಗೊಂಡಿದ್ದರು. ಮತ್ತೊಂದೆಡೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಮೊಬೈಲ್ ಅಂಗಡಿಯೊಂದಕ್ಕೆ ಕೆಲ ದಿನಗಳ ಹಿಂದೆ ಭೇಟಿ ನೀಡಿದ್ದ ಎನ್ಐಎ ಅಧಿಕಾರಿಗಳು, ಹಿಂದು ಕಾರ್ಯಕರ್ತ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಸುದ್ದಗುಂಟೆಪಾಳ್ಯದ ಗುರಪ್ಪನಪಾಳ್ಯದಲ್ಲಿ ಉಗ್ರ ಮುಜಾವೀರ್ ಹುಸೇನ್ ನೆಲಸಿದ್ದ. ಎನ್ಐಎ ದಾಳಿ ನಡೆಸಿದಾಗ 10ಕ್ಕೂ ಹೆಚ್ಚು ಜೀವಂತ ಗುಂಡುಗಳು, ಒಂದು ಗನ್, ಡಿಟೋನೇಟರ್ ಹಾಗೂ ಕಚ್ಚಾ ಬಾಂಬ್ ತಯಾರಿಕೆಗೆ ಬೇಕಾದ ವಸ್ತುಗಳನ್ನು ಜಪ್ತಿ ಮಾಡಲಾಗಿತ್ತು. 2020ರಂದು ಎನ್ಐಎ ದಾಳಿ ನಡೆಸಿತ್ತು. ಅಂದಿನಿಂದ ಮುಜಾವಿರ್ ಹುಸೇನ್ ತಲೆಮರೆಸಿಕೊಂಡಿದ್ದ. ಈತನಿಗೆ ಸಹಾಯ ಮಾಡಿರುವ ಹಿನ್ನೆಲೆಯಲ್ಲಿ ಮುಜಾಮಿಲ್ ಶರೀಫ್ನನ್ನು ಬಂಧಿಸಲಾಗಿದೆ.
ಮುಜಾಮಿಲ್ ಶರೀಫ್ ಇದ್ದ ನಿವಾಸದ ಮೇಲೆ ದಾಳಿ ನಡೆಸಿ ಡಿಜಿಟಲ್ ಡಿವೈಸ್, ನಗದನ್ನು ವಶಕ್ಕೆ ಪಡೆಯಲಾಗಿದೆ. ಈತ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿದ್ದ ಮೋಸ್ಟ್ ವಾಂಟೆಡ್ ಅಬ್ದುಲ್ ಮತೀನ್ ಜತೆಗೆ ನಿರಂತರ ಸಂಪರ್ಕದಲ್ಲಿದ್ದ. ಅಬ್ದುಲ್ ಮತೀನ್ ನೇರವಾಗಿ ಹೊರದೇಶದ ಹ್ಯಾಂಡ್ಲರ್ಗಳ ಜತೆಗೆ ಸಂಪರ್ಕವನ್ನು ಹೊಂದಿದ್ದ. ಅಲ್ಲದೆ, ಶಾರೀಖ್, ಮಾಜ್ ಮುನೀರ್ ಅಹಮದ್ ಮತ್ತು ಸೈಯದ್ ಯಾಸಿನ್ ಜತೆಗೂ ಈತ ಸಂಪರ್ಕ ಸಾಧಿಸಿದ್ದ ಎಂದು ತಿಳಿದುಬಂದಿದೆ.




