ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಪೇಜ್ ರಚಿಸಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ. ಅಲ್ಲದೇ ಬೆಂಗಳೂರಿನ ಆರ್.ಆರ್.ನಗರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಸುಮಾ ವಿರುದ್ಧವೂ ಕಿಡಿಗೇಡಿಗಳು ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ಎಂಬ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯ ಡಿಪಿಯಲ್ಲಿ ಯತೀಂದ್ರ ಫೋಟೋ ಹಾಕಿರುವ ಕಿಡಿಗೇಡಿಗಳು ಸಿದ್ದರಾಮಯ್ಯ ಮತ್ತು ಟಿಪ್ಪು ಸುಲ್ತಾನ್ ಭಾವಚಿತ್ರವನ್ನು ಮಾರ್ಫಿಂಗ್ ಮಾಡಿ ಪೋಸ್ಟ್ ಮಾಡಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಮುಖಂಡ ಶಶಾಂಕ್ ಗೌಡ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕಿಡಿಗೇಡಿಗಳು ಅಶ್ಲೀಲ ಪದಗಳಿಂದ ನಿಂದಿಸಿ ಜತೆಗೆ ಅಸಭ್ಯವಾಗಿ ಫೋಟೋಗಳನ್ನು ಹಾಕಿ ಸಾರ್ವಜನಿಕರನ್ನು ಪ್ರಚೋದಿಸುವ ಪೋಸ್ಟ್ ಹಾಕಲಾಗಿದೆ. ಸಿದ್ದರಾಮಯ್ಯ ಅವರ ಚಿತ್ರ ತಿರುಚಿ, ಅಶ್ಲೀಲದೊಂದಿಗೆ ಅವಾಚ್ಯ ಶಬ್ಧಗಳನ್ನು ಬಳಿಸಿ ಅನೇಕ ಪೋಸ್ಟ್ಗಳನ್ನು ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಪರಿಚಿತ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈಗಾಗಲೇ ಪೊಲೀಸರು ನಕಲಿ ಫೇಸ್ಬುಕ್ ಪೇಜ್ ಡಿಲೀಟ್ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.




