ವಿಜಯಪುರ: ಲೋಕಸಭಾ ಚುನಾವಣೆಯ ಮುಗಿಯುತ್ತಿದ್ದಂತೆ ಕರ್ನಾಟಕದಲ್ಲಿ ಮಹತ್ವದ ರಾಜಕೀಯ ವಿದ್ಯಮಾನಗಳು ನಡೆಯಲಿವೆ. ಚುನಾವಣೆ ಮುಗಿದ 15 ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಪದತ್ಯಾಗ ಮಾಡಲಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಹುದ್ದೆಗೇರಲಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ ಭವಿಷ್ಯ ನುಡಿದಿದ್ದಾರೆ.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿಗಳು ಹಾಗೂ ಕೆಲ ಮಂತ್ರಿಗಳೊಂದಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಒಪ್ಪಂದ ಏರ್ಪಡಿಸಿಕೊಂಡಿದ್ದಾರೆ. ಚುನಾವಣೆಯಲ್ಲಿ ಗೆದ್ದ ನಂತರ ನಾಯಕತ್ವ ಬದಲಾವಣೆಗೆ ಪಟ್ಟು ಹಿಡಿಯಲಿದ್ದಾರೆ. ಅದರ ಪರಿಣಾಮವಾಗಿ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದರು.
ಇದು ಅವರು ಹೆಣೆದಿರುವ ರಾಜಕೀಯ ತಂತ್ರವಾಗಿದೆ. ಆದರೆ ಫಲಿತಾಂಶ ಈ ರೀತಿ ಆಗುವುದಿಲ್ಲ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದ ತಕ್ಷಣವೇ ಕಾಂಗ್ರೆಸ್ ಸರ್ಕಾರ ಪತನ ಹೊಂದಲಿದೆ ಎಂದರು.
ಲೋಕಸಭೆ ಚುನಾವಣೆ ಮುಗಿದ ನಂತರ ಸಿದ್ದರಾಮಯ್ಯ ನೇತೃತ್ವದ ಸರಕಾರ ಪತನ ಹೊಂದಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಅಷ್ಟೇ ಅಲ್ಲ ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿ ಯೋಜನೆಗಳು ಕೂಡ ಹೋಗಲಿವೆ ಎಂದರು.
ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಅನಿವಾರ್ಯ. ಅವರನ್ನು ಬಿಟ್ಟರೆ ಪರ್ಯಾಯ ನಾಯಕರು ಇಲ್ಲ ಎನ್ನುವುದು ಜನರಿಗೆ ಮನದಟ್ಟಾಗಿದೆ. ಹೀಗಾಗಿ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿ ಮತ್ತೆ ಎನ್.ಡಿ.ಎ ಸರ್ಕಾರ ಆರ್ಥಿಕ ಬರಲಿದೆ ಎಂದರು.
ರಾಜ್ಯದಲ್ಲಿ ತಾವು ಆರಂಭಿಸಿರುವ ಸಮರ ನಿಲ್ಲುವುದಿಲ್ಲ. ಬಿಜೆಪಿಯನ್ನು ಅಪ್ಪ ಮಕ್ಕಳ ಹಿಡಿತದಿಂದ ಮುಕ್ತಿ ಮಾಡಲು ತಾವು ಹೋರಾಟ ನಡೆಸುತ್ತಿದ್ದೇನೆ ಎಂದರು.




