ತುಮಕೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರದ ಕಾವು ತೀವ್ರಗೊಂಡಿದ್ದು, ಮೊದಲ ಹಂತದ ಮತದಾನಕ್ಕೆ ವೇದಿಕೆ ಸಜ್ಜಾಗುತ್ತಿರುವ ಬೆನ್ನೆಲ್ಲೇ ಇದೀಗ ಎಲೆಕ್ಟ್ರಾನಿಕ್ ಮತ ಯಂತ್ರಗಳ ವಿಶ್ವಾಸದ ಬಗ್ಗೆ ಮತ್ತೊಂದು ಪ್ರಶ್ನೆ ಎದ್ದಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಮತಯಂತ್ರಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಆರೋಪಗಳು ಸಾಮಾನ್ಯವಾಗಿರುವ ಸಮಯದಲ್ಲಿ ಚುನಾವಣೆಗೂ ಮುನ್ನವೇ ಮತ ಯಂತ್ರಗಳ ಕುರಿತು ಗೃಹ ಸಚಿವ ಪರಮೇಶ್ವರ್ ಆಘಾತಕಾರಿಯಾದ ಹೇಳಿಕೆ ನೀಡಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ದೋಷದ ಬಗ್ಗೆ ನಾವು ಪ್ರಾರಂಭದಿಂದ ಹೇಳುತ್ತಿದ್ದೇವೆ. ಈಗಲೂ ಇವಿಎಂ ಮೇಲೆ ನಮಗೆ ಅನುಮಾನ ಇದೆ ಎಂದರು.
ಕೇರಳದಲ್ಲಿ ಯಾವುದೇ ಬಟನ್ ಒತ್ತಿದರೂ ಬಿಜೆಪಿಗೆ ಮತ ಬಿದ್ದಿದೆ. ಬಿಜೆಪಿಯವರು ಎಲ್ಲ ಕ್ಷೇತ್ರಗಳಲ್ಲಿ ಹೀಗೆ ಮಾಡುವುದಿಲ್ಲ. ತುಂಬಾ ಬುದ್ಧಿವಂತಿಕೆಯಿಂದ ಈ ಕೆಲಸ ಮಾಡುತ್ತಾರೆ. 150-200 ಕ್ಷೇತ್ರ ಬಿಟ್ಟು ಉಳಿದ ಕ್ಷೇತ್ರದಲ್ಲಿ ಹ್ಯಾಕ್ ಮಾಡುತ್ತಾರೆ ಎಂಬ ಅನುಮಾನ ಇದೆ ಎಂದರು.



