ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶ್ರೀರಾಮಮಂದಿರ ವಾರ್ಡ್ ನಲ್ಲಿ ಕೇಂದ್ರ ಲೋಕಸಭಾ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಅವರ ಪರ ಮಾಜಿ ಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಕೇಂದ್ರ ಸರ್ಕಾರ ಸಾಧನೆ ಮತ್ತು ಯೋಜನೆಗಳು ಕುರಿತು ಮನೆ, ಮನೆಗಳಿಗೆ ತೆರಳಿ ಮತಯಾಚನೆ ಮಾಡಿದರು.
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಇದೇ ಸಂದರ್ಭದಲ್ಲಿ ಮಾತನಾಡಿದ ಎಸ್.ಸುರೇಶ್ ಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರು ನನ್ನ ಕುಟುಂಬದಂತೆ ಜನರ ಸುರಕ್ಷತೆ ನನ್ನ ಜವಾಬ್ಬಾರಿ ಎಂಬ ದೃಢ ಸಂಕಲ್ಪ ಮಾಡಿ ಜನರ ಜೀವ, ಜೀವನ ರಕ್ಷಣೆ ಮಾಡುತ್ತಿದ್ದಾರೆ.
ಕೊರೋನ ಸಾಂಕ್ರಮಿಕ ಸಂದರ್ಭದಲ್ಲಿ 220ಕೋಟಿ ಲಸಿಕೆಯನ್ನು ಉಚಿತವಾಗಿ ಜನರಿಗೆ ಹಾಕಿಸಿದರು. ಹಸಿವಿನಿಂದ ಯಾರು ಬಳಲಬಾರದು ಎಂದು 80ಕೋಟಿ ಜನರಿಗೆ ಉಚಿತವಾಗಿ ಅಕ್ಕಿ ನೀಡಿ, ಹಸಿವು ಮುಕ್ತ ರಾಷ್ಟ್ರ ನಿರ್ಮಾಣ ಮಾಡಿದರು.
ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಜನ್ ಧನ್, ಮುದ್ರ ಯೋಜನೆ, ಪಿ.ಎಂ.ವಿಶ್ವಕರ್ಮ ಯೋಜನೆಗಳಿಂದ 25ಕೋಟಿ ಜನರು ಆರ್ಥಿಕವಾಗಿ ಸಬಲರಾಗಿದ್ದಾರೆ.
ಪ್ರಧಾನಿ ನರೇಂದ್ರಮೋದಿರವರ ನೇತೃತ್ವ ಮತ್ತು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮಾರ್ಗದರ್ಶನದಿಂದ ರಾಜ್ಯದಲ್ಲಿ 28ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಕೂಟ ಜಯಭೇರಿ ಬಾರಿಸಲಿದೆ ಎಂದು ಹೇಳಿದರು.
ಮಂಡಲ ಅಧ್ಯಕ್ಷರಾದ ಸುದರ್ಶನ್, ಮಾಜಿ ಬಿಬಿಎಂಪಿ ಸದಸ್ಯೆ ದೀಪಾ ನಾಗೇಶ್, ಬಿಜೆಪಿ ಮುಖಂಡರುಗಳಾದ ಬಿ.ಎನ್.ಶ್ರೀನಿವಾಸ್, ಕಿರಣ್, ಅಮಿತ್ ಜೈನ್, ಕೃಷ್ಣಮೂರ್ತಿ, ಮೋಹನ್ ರಾಜ್, ವೆಂಕಟೇಶ್, ಪೂರ್ಣಿಮಾ ಬಿಜೆಪಿ ಕಾರ್ಯಕರ್ತರುಗಳು ಪಾಲ್ಗೊಂಡಿದ್ದರು.



