ಕೇಂದ್ರದಿಂದ ಆದ ಅನ್ಯಾಯ ಪ್ರಶ್ನಿಸಿದ ಏಕೈಕ ಸಂಸದ ಡಿ.ಕೆ.ಸುರೇಶ್ ಅವರನ್ನು ಗೆಲ್ಲಿಸಿ: ಸಿದ್ದರಾಮಯ್ಯ

2 years ago

ಬೆಂಗಳೂರು: ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯವನ್ನು ಪ್ರಶ್ನಿಸಿದ ಏಕೈಕ ಸಂಸದ ಡಿ.ಕೆ.ಸುರೇಶ್. ಉಳಿದ ಯಾವ ಸಂಸದರೂ ನೆಪಕ್ಕೂ ಪ್ರಶ್ನಿಸಲಿಲ್ಲ. ಹೀಗಾಗಿ ಇವರಿಗೆ ಆಶೀರ್ವದಿಸಿ ಲೋಕಸಭೆಗೆ ಕಳುಹಿಸಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಹೆಬ್ಬಗೋಡಿಯಲ್ಲಿ ನಡೆದ ಜನಸಮಾವೇಶವನ್ನು ಉದ್ಘಾಟಿಸಿ, ಕಾಂಗ್ರೆಸ್ ಅಭ್ಯರ್ಥಿ DK Suresh ಅವರಿಗೆ ಮತ ನೀಡುವಂತೆ ಆಗಮಿಸಿದ್ದ ಸಹಸ್ರಾರು ಜನರನ್ನು ಉದ್ದೇಶಿಸಿ ಮಾತಾಡಿದ ಅವರು, ಡಿ.ಕೆ.ಸುರೇಶ್ ಅವರು ಜನಸಾಮಾನ್ಯರ ಜತೆ ಬೆರೆತು ಹಳ್ಳಿ ಹಳ್ಳಿಗೂ ಚಿರಪರಿಚಿತರು ಎಂದರು.

ದೇವೇಗೌಡರ ಅಳಿಯ ಮಂಜುನಾಥ್ ಅವರನ್ನು ಬಿಜೆಪಿಯಿಂದ ಇಲ್ಲಿ ಕಣಕ್ಕೆ ಇಳಿಸಿದ್ದಾರೆ. ಮಗನನ್ನು ಮಂಡ್ಯದಿಂದ, ಮೊಮ್ಮಗನನ್ನು ಹಾಸನದಿಂದ ನಿಲ್ಲಿಸಿದ್ದಾರೆ. ಕೋಲಾರ ದಲಿತ ಮೀಸಲು ಕ್ಷೇತ್ರ ಆಗದೇ ಇದ್ದಿದ್ದರೆ ಅಲ್ಲಿಂದಲೂ ಇವರ ಕುಟುಂಬದವರನ್ನೇ ಕಣಕ್ಕೆ ಇಳಿಸುತ್ತಿದ್ದರು. ಇಲ್ಲಿ ಮಂಜುನಾಥ್ರನ್ನು ಸೋಲಿಸಿ ದೇವೇಗೌಡರ ಕುಟುಂಬ ರಾಜಕಾರಣಕ್ಕೆ ತಕ್ಕ ಪಾಠ ಕಲಿಸಿ ಎಂದು ಕರೆನೀಡಿದರು.

Leave a Reply