ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ.
ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.
– ಸಿದ್ದರಾಮಯ್ಯ, ಸಿಎಂ




