ವಿಧಾನ ಪರಿಷತ್ತಿನ ಚುನಾವಣೆಗೆ ವೇಳಾಪಟ್ಟಿ ಪ್ರಕಟ

2 years ago

ಬೆಂಗಳೂರು: ಲೋಕಸಭೆ ಚುನಾವಣೆ ಮುಕ್ತಾಯವಾಗುತ್ತಿರುವ ಬೆನ್ನಲ್ಲೇ ಮತ್ತೊಂದು ಚುನಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಜೂನ್ ನಲ್ಲಿ ತೆರವಾಗಲಿರುವ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ರಾಜ್ಯದ ಈಶಾನ್ಯ ಪದವೀಧರರ ಕ್ಷೇತ್ರದ ಡಾ.ಚಂದ್ರಶೇಖರ್ ಬಿ. ಪಾಟೀಲ್, ನೈರುತ್ಯ ಪದವೀಧರರ ಕ್ಷೇತ್ರದ ಆಯನೂರು ಮಂಜುನಾಥ್, ಬೆಂಗಳೂರು ಪದವೀಧರರ ಕ್ಷೇತ್ರದ ಎ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದ ವೈ.ಎ.ನಾರಾಯಣಸ್ವಾಮಿ, ನೈರುತ್ಯ ಶಿಕ್ಷಕರ ಕ್ಷೇತ್ರದ ಎಸ್.ಎಲ್.ಭೋಜೇಗೌಡ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಮರಿತಿಬ್ಬೇಗೌಡ ಅವರ ಅವಧಿ ಇದೇ ವರ್ಷ ಜೂನ್ 21 ರಂದು ಕೊನೆಗೊಳ್ಳಲಿದೆ.

ಮೇಲಿನ ಸ್ಥಾನಗಳಿಗೆ ಜೂನ್ 12ರ ಒಳಗೆ ಚುನಾವಣೆ ಪ್ರಕ್ರಿಯೆ ನಡೆಯಬೇಕಿದೆ. ಹೀಗಾಗಿ, ವೇಳಾಪಟ್ಟಿ ಪ್ರಕಟಿಸಲಾಗಿದೆ.

ಚುನಾವಣೆ ಅಧಿಸೂಚನೆ: ಮೇ 09, 2024
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 16, 2024
ನಾಮಪತ್ರ ಪರಿಶೀಲನೆ: ಮೇ 17, 2024
ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ: ಮೇ 20, 2024
ಮತದಾನ: ಜೂನ್ 03, 2024
ಮತ ಎಣಿಕೆ: ಜೂನ್ 06, 2024

Leave a Reply