ಶಿವಮೊಗ್ಗ: ಕಳೆದ 10 ವರ್ಷಗಳಿಂದಲೂ ಕೇವಲ 22 ಜನರಿಗಾಗಿ ಮೋದಿ ಕೆಲಸ ಮಾಡಿದ್ದಾರೆ. ಬಜೆಟ್ನ ಹಣವನ್ನು ಅದಾನಿ ಅಂಬಾನಿಯಂತಹ ಜನರ ಜೇಬಿಗೆ ಹಾಕಿದ್ದಾರೆ. ಅವರ 16 ಲಕ್ಷ ಕೋಟಿ ರೂ. ಸಾಲವನ್ನು ಮನ್ನಾ ಮಾಡಿದ್ದಾರೆ. ಮೋದಿ ಕೆಲವೇ ವ್ಯಕ್ತಿಗಳನ್ನು ಕೋಟ್ಯಾಧೀಶರರನ್ನಾಗಿ ಮಾಡುತ್ತಿದ್ದರೆ. ನಮ್ಮ ಉದ್ದೇಶ ದೇಶದ ಪ್ರತಿಯೊಬ್ಬರನ್ನೂ ಲಕ್ಷಾಪತಿಗಳನ್ನಾಗಿ ಮಾಡುವುದು ಎಂದು ರಾಹುಲ್ ಗಾಂಧಿ ಹೇಳಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಮತಯಾಚನೆ ಮಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ಪಂಚಖಾತ್ರಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಗೃಹಲಕ್ಷ್ಮಿಯ ಮಾದರಿಯಲ್ಲೇ ರಾಷ್ಟ್ರಮಟ್ಟದಲ್ಲಿ ಮಹಾಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗುವುದು. ನಾವು ಅಧಿಕಾರಕ್ಕೆ ಬರುತ್ತಿದ್ದಂತೆ ಇದನ್ನು ಅನುಷ್ಠಾನಕ್ಕೆ ತಂದು ದೇಶದ ಪ್ರತಿ ಬಡ ಕುಟುಂಬಕ್ಕೂ ಆರ್ಥಿಕ ನೆರವು ನೀಡಲು ಈಗಾಗಲೇ ಪಟ್ಟಿ ಸಿದ್ಧಗೊಳಿಸಲಾಗುತ್ತಿದೆ ಎಂದರು.
ಪ್ರತಿ ಕುಟುಂಬದಿಂದಲೂ ಒಬ್ಬ ಮಹಿಳೆಯ ಹೆಸರನ್ನು ಪಡೆದುಕೊಳ್ಳಲಾಗುತ್ತಿದ್ದು, ಆಕೆಯ ಖಾತೆಗೆ ವರ್ಷಕ್ಕೆ 1 ಲಕ್ಷ ರೂ.ಗಳನ್ನು ಪ್ರತಿ ತಿಂಗಳು 8,500 ರೂ.ಗಳನ್ನು ಬ್ಯಾಂಕ್ ಖಾತೆಗೆ ನೇರವಾಗಿ ಪಾವತಿಸಲಾಗುವುದು ಎಂದು ಭರವಸೆ ನೀಡಿದರು.
ದಲಿತರು, ಹಿಂದುಳಿದ ವರ್ಗದವರು, ಆದಿವಾಸಿಗಳು, ಶೋಷಿತರ ಪರವಾಗಿ ಮಾತನಾಡುವವರು ನಕ್ಸಲರು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹೇಳಿದ್ದಾರೆ. ಈ ಮೂಲಕ ಸಂವಿಧಾನದ ಮೇಲೆ ಆಕ್ರಮಣ ಮಾಡಲಾಗಿದೆ ಎಂದರು.




